ಶಿಕ್ಷಕ ವೃತ್ತಿಗೆ ನಿವೃತ್ತಿಯೇ ಇಲ್ಲ: ರಾಧಾಕೃಷ್ಣ ಭಟ್ಟ

KannadaprabhaNewsNetwork |  
Published : Jun 02, 2026, 02:45 AM IST
ಭಟ್ಕಳದ ಕಾಯ್ಕಿಣಿಯ ಗಡಿಮುಂಡ್ಕಿ ಶಾಲೆಯಲ್ಲಿ  ಸೇವೆ ಸಲ್ಲಿಸಿ ನಿವೃತ್ತರಾದ ಮಮತಾ ನಾಯಕ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. | Kannada Prabha

ಸಾರಾಂಶ

ಕಾಯ್ಕಿಣಿಯ ಗಡಿಮುಂಡ್ಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಮತಾ ನಾಯಕ ಅವರಿಗೆ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ., ಹಾಗೂ ಊರ ನಾಗರಿಕರು ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ ಉದ್ಘಾಟಿಸಿದರು.

ನಿವೃತ್ತರಾದ ಮಮತಾ ನಾಯಕ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಭಟ್ಕಳ

ಕಾಯ್ಕಿಣಿಯ ಗಡಿಮುಂಡ್ಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಮತಾ ನಾಯಕ ಅವರಿಗೆ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ., ಹಾಗೂ ಊರ ನಾಗರಿಕರು ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಶಿಕ್ಷಕರ ವೃತ್ತಿ ಅತ್ಯಂತ ಶ್ರೇಷ್ಠವಾದುದಾಗಿದ್ದು ವೃತ್ತಿಗೆ ನಿವೃತ್ತಿಯೇ ಇಲ್ಲ. ಇಲ್ಲಿ ಮಮತಾ ನಾಯಕ ವಯೋನಿವೃತ್ತಿ ಹೊಂದುತ್ತಿದ್ದು ಅವರ ಆಗಾಧವಾದ ಜ್ಞಾನ ಸಮಾಜಕ್ಕೆ ಒಂದಲ್ಲ ಒಂದು ರೀತಿಯಲ್ಲಿ ದೊರೆಯುತ್ತಿರುತ್ತದೆ. ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ಹುದ್ದೆಯಾಗಿದ್ದು ಯಾರು ಎಷ್ಟೇ ದೊಡ್ಡ ವ್ಯಕ್ತಿಯಾಗಿ ನಿಂತರೂ ಕೂಡಾ ತಮ್ಮ ಶಿಕ್ಷಕರಿಗೆ ಮೊದಲ ಗೌರವ ಸಲ್ಲಿಸುತ್ತಾರೆ ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. ಊರಿನ ಹಿರಿಯ, ಶಿಕ್ಷಣ ಪ್ರೇಮಿ ವೆಂಕ್ಟಯ್ಯ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ಕೆರೆಕಟ್ಟೆ, ಕುಮಟಾ ಡಯಟ್‌ನ ಉಪನ್ಯಾಸಕ ಎಸ್.ಪಿ.ಭಟ್, ಜಿಪಂ ಮಾಜಿ ಸದಸ್ಯೆ ಸಿಂಧು ಭಾಸ್ಕರ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಪೂರ್ಣಿಮಾ ನಾಯ್ಕ, ಸಹ ಕಾರ್ಯದರ್ಶಿ ಜನಾರ್ಧನ ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ದೀಪಾ ಗಜಾನನ ನಾಯ್ಕ, ವಿದ್ಯಾಸಿರಿ ಹಳೆ ವಿದ್ಯಾರ್ಥಿ ಸಂಘದ ಅದ್ಯಕ್ಷ ಪುಂಡಲೀಕ ನಾಯ್ಕ, ಶಿಕ್ಷಕ ರಾಮಚಂದ್ರ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ವಸಂತ ನಾಯ್ಕ ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಮುಖ್ಯ ಶಿಕ್ಷಕ ಐ.ವಿ. ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಶ್ವೇತಾ ರಾಣೆ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಿ: ಟಿ.ಎಸ್.ಗೋಪಾಲ್
ಮಾನಸಿಕ ಕಾಯಿಲೆಗೆ ಓದು-ಸಂಗೀತವೇ ದಿವ್ಯೌಷಧ