ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬರವಿಲ್ಲ

KannadaprabhaNewsNetwork |  
Published : Aug 15, 2025, 01:00 AM IST
೧೩ ವೈಎಲ್‌ಬಿ ೦೩ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿ ಮಂಜೂರಾದ ಹಿನ್ನೆಲೆಯಲ್ಲಿ ಯಲಬುರ್ಗಾದ ಬಯಲು ರಂಗಮAದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮೋತ್ಸವದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಯಂಕಣ್ಣ ಯರಾಶಿ ಮಾತನಾಡಿದರು. | Kannada Prabha

ಸಾರಾಂಶ

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ರಾಯರಡ್ಡಿ ಅವರಿಂದ ಆಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಬರವಿಲ್ಲ. ಅಲ್ಲದೆ ಕ್ಷೇತ್ರದಲ್ಲಿ ಕೆರೆ ತುಂಬಿಸುವ ಕಾರ್ಯ ನಡೆದಿದೆ. ಇನ್ನೂ ಮೂರು ವರ್ಷಗಳಲ್ಲಿ ಅಭಿವೃದ್ಧಿ ಸುನಾಮಿ ನಡೆಯಲಿದೆ.

ಯಲಬುರ್ಗಾ:

ಬಸವರಾಜ ರಾಯರಡ್ಡಿ ಅವರು ಸಚಿವರಾಗದಿದ್ದರೂ ಶಾಸಕರಾಗಿ ಕ್ಷೇತ್ರದಲ್ಲಿ ರಾಜ್ಯದ ಯಾವ ಶಾಸಕರು ಮಾಡದಂತ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಯಂಕಣ್ಣ ಯರಾಶಿ ಹೇಳಿದರು.

ತಾಲೂಕಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮಂಜೂರಾದ ಹಿನ್ನೆಲೆಯಲ್ಲಿ ಪಟ್ಟಣದ ಬಯಲು ರಂಗಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ಪಟ್ಟಣಕ್ಕೆ ಬಿಎಸ್ಸಿ ನರ್ಸಿಂಗ್ ಕಾಲೇಜು, ಪ್ರಜಾಸೌಧ, ತಾಲೂಕು ಕ್ರೀಡಾಂಗಣಕ್ಕೆ ಅನುದಾನ, ಕುಕನೂರು ತಾಲೂಕಿಗೆ ಕಟ್ಟಡ ಕಾರ್ಮಿಕ ಮಕ್ಕಳಿಗೆ ವಸತಿ ಶಾಲೆ, ತಾಳಕೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಕಾಲೇಜಾಗಿ ಉನ್ನತೀಕರಣ, ಬಸ್ ನಿಲ್ದಾಣ, ಸಮುದಾಯ ಭವನ ಸೇರಿ ನಾನಾ ಕಾಮಗಾರಿಗಳಿಗೆ ನೂರಾರು ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ರಾಯರಡ್ಡಿ ಅವರಿಂದ ಆಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಬರವಿಲ್ಲ. ಅಲ್ಲದೆ ಕ್ಷೇತ್ರದಲ್ಲಿ ಕೆರೆ ತುಂಬಿಸುವ ಕಾರ್ಯ ನಡೆದಿದೆ. ಇನ್ನೂ ಮೂರು ವರ್ಷಗಳಲ್ಲಿ ಅಭಿವೃದ್ಧಿ ಸುನಾಮಿ ನಡೆಯಲಿದೆ. ತಾಲೂಕು ಕೇಂದ್ರಗಳಲ್ಲಿ ಮಹನೀಯರ ವೃತ್ತ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದರು. ಇದೇ ವೇಳೆ ಕನಕದಾಸ ವೃತ್ತದಿಂದ ಬಯಲು ರಂಗಮಂದಿರದ ವರೆಗೆ ಸಂಭ್ರಮೋತ್ಸವದ ಮೆರವಣಿಗೆ ನಡೆಯಿತು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಹನುಮಂತಗೌಡ ಪಾಟೀಲ್, ಶೇಖರಗೌಡ ಉಳ್ಳಾಗಡ್ಡಿ, ವೀರನಗೌಡ ಬಳೂಟಗಿ, ಸತ್ಯನಾರಾಯಣಪ್ಪ ಹರಪನಹಳ್ಳಿ, ಮಹೇಶ ಹಳ್ಳಿ, ಸಂಗಣ್ಣ ತೆಂಗಿನಕಾಯಿ, ಡಾ. ಶಿವನಗೌಡ ದಾನರಡ್ಡಿ, ಆನಂದ ಉಳ್ಳಾಗಡ್ಡಿ, ರೇವಣಪ್ಪ ಸಂಗಟಿ, ಅಶೋಕ ತೋಟದ, ಹಂಪಯ್ಯಸ್ವಾಮಿ ಹಿರೇಮಠ, ಮಹಾಂತೇಶ ಗಾಣಿಗೇರ, ಹೇಮರಡ್ಡಿ ರಡ್ಡೇರ, ಸುಧೀರ ಕೊರ್ಲಹಳ್ಳಿ, ಮಲ್ಲಿಕಾರ್ಜುನ ಜಕ್ಕಲಿ, ಸಾವಿತ್ರಿ ಗೊಲ್ಲರ್, ಸಂಗಮೇಶ ಗುತ್ತಿ, ಭೀಮಣ್ಣ ಕೊಳಜಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!