ಜೀವನದ ಪ್ರತಿ ಹಂತದಲ್ಲೂ ವಿಜ್ಞಾನವಿದೆ: ಯಾದವ್

KannadaprabhaNewsNetwork |  
Published : Mar 01, 2024, 02:15 AM IST
ಚಿತ್ರ 1 | Kannada Prabha

ಸಾರಾಂಶ

ಮನುಷ್ಯನ ಹುಟ್ಟಿನಿಂದ ಸಾಯುವವರೆಗೆ ವಿಜ್ಞಾನ ಪ್ರತಿ ಹಂತದಲ್ಲೂ ಬಳಕೆಯಾಗುತ್ತದೆ.

ಹಿರಿಯೂರು: ಮನುಷ್ಯನ ಹುಟ್ಟಿನಿಂದ ಸಾಯುವವರೆಗೆ ವಿಜ್ಞಾನ ಪ್ರತಿ ಹಂತದಲ್ಲೂ ಬಳಕೆಯಾಗುತ್ತದೆ ಎಂದು ಬಸವರಾಜ್ ಪ್ಯಾರಮೆಡಿಕಲ್ ಮತ್ತು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಯಾದವ್ ಹೇಳಿದರು.

ನಗರದ ಹೊರವಲಯದಲ್ಲಿರುವ ಬಸವರಾಜ್ ಪ್ಯಾರಮೆಡಿಕಲ್ ಮತ್ತು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನುಷ್ಯನ ದಿನ ನಿತ್ಯದ ಜೀವನದಲ್ಲಿ ವಿಜ್ಞಾನ ಹಾಸು ಹೊಕ್ಕಾಗಿದೆ. ವಿಜ್ಞಾನವಿಲ್ಲದ ಬದುಕನ್ನು ಕಲ್ಪಿಸಿಕೊಳ್ಳುವುದಕ್ಕೂ ಅಸಾಧ್ಯ ಎಂಬಷ್ಟು ನಾವು ಅದರೊಂದಿಗೆ ಬೆರೆತು ಹೋಗಿದ್ದೇವೆ. ವೈಜ್ಞಾನಿಕ ತಂತ್ರಜ್ಞಾನವನ್ನು ಮಾನವನ ಅಭಿವೃದ್ಧಿಗೆ ಸದ್ಭಳಕೆ ಮಾಡಿಕೊಳ್ಳಬೇಕಾಗಿದೆ. ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಸಮಾಜಕ್ಕೆ ಪೂರಕವಾದಂತಹ ಬದುಕನ್ನು ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಲಾವಣ್ಯ, ಹರ್ಷಿತಾ, ಕೀರ್ತನ, ಅಮಿತ, ಲಿಖಿತ, ಮೀನಾ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ