ವೃತ್ತಿ-ವೈಯಕ್ತಿಕ ಜೀವನ ಸಮತೋಲವಿರಲಿ

KannadaprabhaNewsNetwork |  
Published : Nov 11, 2025, 03:15 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಸಮತೋಲನ ಅಗತ್ಯ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ (ಪಿಎಮ್ -ಉಷಾ) ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬೆಂಗಳೂರು ಇವರ ಹಣಕಾಸು ನೆರವಿನೊಂದಿಗೆ ಬುಧವಾರ ಆಯೋಜಿಸಿದ್ದ ಉದ್ಯೋಗನಿರತ ಮಹಿಳೆಯರ ಕೆಲಸ ಮತ್ತು ಜೀವನ ಸಮತೋಲನ‌ ಎಂಬ ವಿಷಯದ ಕುರಿತಾಗಿ ಹಮ್ಮಿಕೊಂಡಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಸಮತೋಲನ ಅಗತ್ಯ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ (ಪಿಎಮ್ -ಉಷಾ) ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬೆಂಗಳೂರು ಇವರ ಹಣಕಾಸು ನೆರವಿನೊಂದಿಗೆ ಬುಧವಾರ ಆಯೋಜಿಸಿದ್ದ ಉದ್ಯೋಗನಿರತ ಮಹಿಳೆಯರ ಕೆಲಸ ಮತ್ತು ಜೀವನ ಸಮತೋಲನ‌ ಎಂಬ ವಿಷಯದ ಕುರಿತಾಗಿ ಹಮ್ಮಿಕೊಂಡಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವೇಗದ ಜಗತ್ತಿನಲ್ಲಿ ಕೆಲಸ ಮತ್ತು ಜೀವನದ ಸಮತೋಲನ ಅತ್ಯಂತ ಮುಖ್ಯವಾಗಿದೆ. ವಿಶೇಷವಾಗಿ ವೃತ್ತಿನಿರತ ಮಹಿಳೆಯರು ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಜೀವನದ ಬೇಡಿಕೆಗಳು ಮತ್ತು ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಕಲೆ ಅರಿತುಕೊಳ್ಳಬೇಕಾಗಿದೆ. ಇಂದಿನ ಬಹುತೇಕ ಕ್ಷೇತ್ರಗಳಲ್ಲಿ ಕೆಲಸದ ಒತ್ತಡವೂ ಸಾಮಾನ್ಯವಾಗಿದ್ದು, ಅದನ್ನು ಕಡಿಮೆ ಮಾಡಲು ಸಮಯವನ್ನು ವಿನಿಯೋಗ ಮಾಡಿಕೊಳ್ಳಬೇಕು. ಆದ್ಯತೆಗಳ ನಿರ್ಧಾರ, ಕೆಲಸದ ನಡುವಿನ ವಿರಾಮ, ಸಾಮಾಜಿಕ ಮಾಧ್ಯಮ ಬಳಕೆಯಲ್ಲಿ ಕೆಲಸದ ಯೋಜನೆ ಮತ್ತು ಸ್ವಯಂ ಕಾಳಜಿಯಂತಹ ಅಂಶಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ. ಇವುಗಳ ಮೂಲಕ ಮಹಿಳೆಯರು ತಮ್ಮ ವೃತ್ತಿ ಮತ್ತು ವೈಯಕ್ತಿಕ ಜೀವನದ ನಡುವಿನ ಸಮತೋಲನವನ್ನು ಸಾಧಿಸಬಹುದಾಗಿದೆ ಎಂಬುದನ್ನು ತಿಳಿಸಿದರು.ಬಿ.ಎಮ್.ಪಾಟೀಲ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಸಂತೋಷ ರಾಮದುರ್ಗ ಮಾತನಾಡಿ, ಅತಿಯಾದ ಒತ್ತಡದಿಂದ ಮಹಿಳೆಯರು ಆಕ್ರಮಣಕಾರಿ ಮನೋಭಾವ, ಹತಾಶೆ, ಖಿನ್ನತೆ, ರಕ್ತಹೀನತೆ ಹಾಗೂ ಕೆಲಸದ ನಿರಾಸಕ್ತಿಯ ಮನೋಸ್ಥಿತಿಗೆ ಒಳಗಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ನಿವೃತ್ತ ಹಿರಿಯ ಪ್ರಾಧ್ಯಾಪಕ ಪ್ರೊ.ಎಸ್.ಎ.ಖಾಜಿ ಮಾತನಾಡಿ, ಮಹಿಳೆಯರ ಒತ್ತಡವು ಅವರ ಭಾವನಾತ್ಮಕ ಮತ್ತು ದೈಹಿಕ ಯೋಗಕ್ಷೇಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇಂತಹ ಒತ್ತಡವು ಆತಂಕ, ಕಿರಿಕಿರಿ ಹಾಗೂ ಮನೋಭಾವನೆಗಳ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ತಿಳಿಸಿದರು.ಮನೋವೈದ್ಯಕೀಯ ಸಮಾಜ ಕಾರ್ಯಕರ್ತ ಪ್ರಶಾಂತ ಪಾಟೀಲ ಮಾತನಾಡಿ, ಇಂದಿನ ದೈನಂದಿನ ಒತ್ತಡದ ಜೀವನದಲ್ಲಿ ನಾವು ನಮ್ಮ ಬಗ್ಗೆ ಸ್ವಲ್ಪ ಸಮಯವನ್ನು ಮೀಸಲಿಟ್ಟು ಸ್ವ-ಆರೈಕೆಯನ್ನು ಮತ್ತು ಸ್ವ-ಅರಿವು ಮಾಡಿಕೊಳ್ಳುವುದು ಅತ್ಯಾವಶ್ಯಕ‌ವಾಗಿದೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದರು. ಪ್ರೊ.ಎಸ್.ಬಿ.ಮಾಡಗಿ, ಡಾ.ಕಲಾವತಿ ಕಾಂಬಳೆ, ಡಾ.ರಮೇಶ ಸೋನಕಾಂಬಳೆ, ಶರಣಬಸು ಕೊಡಬಾಗಿ, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರೊ.ಜಿ.ಬಿ.ಸೋನಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ.ಶಿವಲಿಂಗ ಮೇತ್ರಿ ಸ್ವಾಗತಿಸಿ, ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ