ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕುವಲ್ಲಿ ವಿಳಂಬ ಬೇಡ: ಅಸೂಟಿ

KannadaprabhaNewsNetwork |  
Published : Jun 27, 2025, 12:48 AM IST
ಸಭೆಯಲ್ಲಿ ಬಿ.ಬಿ.ಅಸೂಟಿ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ಶಿರಹಟ್ಟಿ: ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು. ಪಟ್ಟಣದಲ್ಲಿ ಜರುಗಿದ ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಅಕ್ಕಿ ಅಕ್ರಮವಾಗಿ ಮಾರಾಟವಾಗುತ್ತಿರುವ ಕುರಿತು ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಎಲ್ಲ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಅಕ್ಕಿ, ಜೋಳ ವಿತರಣೆಯಾಗಬೇಕು. ಯಾವ ಬಡ ಕುಟುಂಬವೂ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಬೇಕು ಎಂದರು.ಬಸ್ ನಿಲ್ದಾಣದ ಆವರಣ, ಅಲ್ಲಿನ ಶೌಚಾಲಯ ಸ್ವಚ್ಛವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಯುವನಿಧಿ ಯೋಜನೆ ಸಮರ್ಪಕವಾಗಿ ಪದವಿಗಳನ್ನು ಪಡೆದ ಎಲ್ಲಾ ಯುವಕರಿಗೂ ತಲುಪಿಸಲು ಅಧಿಕಾರಿಗಳು ಪದವಿ ಹೊಂದಿದವರಿಗೆ ನೋಂದಾಯಿಸಿಕೊಳ್ಳಲು ಉತ್ತೇಜನ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.ಗೃಹಜ್ಯೋತಿ ಎಲ್ಲಾ ಕುಟುಂಬಕ್ಕೂ ಈ ಯೋಜನೆ ತಲುಪಿಸಲು ಅಧಿಕಾರಿಗಳು ಶ್ರಮವಹಿಸಬೇಕು. ಶಕ್ತಿ ಯೋಜನೆ ಎಲ್ಲ ಮಹಿಳೆಯರಿಗೆ ಪ್ರತಿಶತ 100ರಷ್ಟು ಉಪಯೋಗಿಸುತ್ತಿದ್ದು ಇನ್ನು ಹೆಚ್ಚಿನ ಬಸ್ಸಿನ ವ್ಯವಸ್ಥೆ ಮತ್ತು ಬಸ್ ನಿಲ್ದಾಣವನ್ನು ಸ್ವಚ್ಛವಾಗಿ ಇಡಲು ಹಾಗೂ ಅಲ್ಲಿನ ಶೌಚಾಲಯಗಳನ್ನು ಸ್ವಚ್ಛವಾಗಿಡಲು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಿರಹಟ್ಟಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಅವುಗಳ ಸಮರ್ಪಕ ಅನುಷ್ಠಾನದ ಕುರಿತು ಪರಾಮರ್ಶೆ ನಡೆಸಬೇಕು. ಅರ್ಹರಿಗೆ ನಿಗದಿತ ಯೋಜನೆಗಳ ಸೌಲಭ್ಯ ನಿಗದಿತ, ಅವಧಿಯೊಳಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ. ಅರ್ಹರು ಯೋಜನೆಗಳಿಂದ ವಂಚಿತರಾಗದಂತೆ ಅಧಿಕಾರಿ ವಲಯ ಕ್ರಮ ವಹಿಸಬೇಕು. ಬಡವರು ಆರ್ಥಿಕ ಸ್ವಾವಲಂಭಿಗಳಾಗಿಸುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಪ್ರಮುಖ ಅಸ್ತ್ರಗಳಾಗಿವೆ ಎಂದರು.

ಈ ವೇಳೆ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಿವನಗೌಡ ಪಾಟೀಲ, ಮಲ್ಲಪ್ಪ ಹುಯಿಲಗೊಳ, ಬುಡೇಸಾಬ ಮಕಾಂದರ, ದೇವಪ್ಪ ಲಮಾಣಿ, ವಿಶಾಲಾ ಹೊನ್ನಣ್ಣವರ, ಸುರೇಶ್ ಕೆಂಚರಡ್ಡಿರ, ಶಕುಂತಲಾ ವಿಭೂತಿಮಠ, ಹೊನ್ನೇಶ ಪೋಟಿ, ಮಹಾವೀರ ಮಂಟಗನ, ಅಂದನಗೌಡ ಪಾಟೀಲ, ಸೋಮನಗೌಡ ಮರಿಗೌಡರ ಸೇರಿದಂತೆ ಇತರರು ಇದ್ದರು.

PREV

Recommended Stories

ಮಹರ್ಷಿ ವಾಲ್ಮೀಕಿ ಕವಿಕುಲದ ಸಾರ್ವಭೌಮ: ಸಾಲವಾಡಗಿ
ಅಪಘಾತದಲ್ಲಿ ಪತ್ರಕರ್ತ ಕಾನಗೊಂಡ ಸಾವು