ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಕೊಡಗು ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗು ಪತ್ರಕರ್ತರ ಸಂಘ ಬಲಿಷ್ಠವಾಗಬೇಕಾದರೆ ಸಂಘದ ಸಾರಥಿ ಗಟ್ಟಿಯಾಗಿರಬೇಕು. ಅನಿಲ್ ಎಚ್.ಟಿ. ಅವರು ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘವನ್ನು ಮುನ್ನಡೆಸಲಿದ್ದಾರೆ. ಸಂಘದಲ್ಲಿ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸುವುದಾಗಿ ಘೋಷಿಸಿದರು.ಕೂರ್ಗ್ ಹೋಟೆಲ್ಸ್ , ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಸಂಘದ ವಾಹನ ಸ್ಟಿಕ್ಕರ್ ಬಿಡುಗಡೆಗೊಳಿಸಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಕಾಳಜಿಯಿಂದ ಪತ್ರಿಕಾರಂಗ ನಡೆಯುತ್ತಿದೆ. ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರು ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗು ಪತ್ರಕರ್ತರ ಸಂಘಕ್ಕೆ ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಕೊಡಗು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅನಿಲ್ ಎಚ್.ಟಿ., ಶಕ್ತಿ ಪತ್ರಿಕೆಯ ಸ್ಥಾಪಕ ಬಿ.ಎಸ್. ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಪದಗ್ರಹಣ ಸ್ವೀಕರಿಸಿ ಮಾತನಾಡಿ, ನಿವೇಶನ ರಹಿತ ಪತ್ರಕರ್ತರಿಗೆ ನಿವೇಶನ, ಪತ್ರಕರ್ತರು ಹಾಗೂ ತಮ್ಮ ಕುಟುಂಬ ಸದಸ್ಯರಿಗೆ ಗುಂಪು ಆರೋಗ್ಯ ವಿಮೆ ಸೇರಿದಂತೆ ಹಲವು ಉಪಯುಕ್ತ ಯೋಜನೆ ರೂಪಿಸಲಾಗುತ್ತದೆ ಎಂದರು.
ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್ ಮಾತನಾಡಿ, ಪತ್ರಕರ್ತರ ಸಂಘ ಸಾರ್ವಜನಿಕವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಹೊಸ ಸಂಘವನ್ನು ರಚನೆ ಮಾಡಿ ಕಳೆದ ಎರಡು ವರ್ಷದಿಂದ ಅತ್ಯುತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ಮಾತನಾಡಿದರು.
ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಉಜ್ವಲ್ ರಂಜಿತ್, ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ನಿರ್ದೇಶಕ ವಿನೋದ್ ಮೂಡಗದ್ದೆ, ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ನಿರ್ದೇಶಕ ರಂಜಿತ್ ಕವಲಪಾರ ನಿರೂಪಿಸಿದರು.
ವಿರಾಜಪೇಟೆಯ ಪುರಸಭೆಯ ಮಾಜಿ ಅಧ್ಯಕ್ಷೆ ಕಾಂತಿ ಸತೀಶ್ ಸಂಘಕ್ಕೆ ದತ್ತಿ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು.
ಸಾಂಸ್ಕೃತಿಕ ಸಂಭ್ರಮ: ಸಂಘದ ಸಲಹೆಗಾರರಾದ ಬಿ.ಜಿ.ಅನಂತಶಯನ ಅವರು ಹಾಡು ಹಾಡುವ ಮೂಲಕ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಜ್ವಲ್ ರಂಜಿತ್, ಟಿಜೆ.ಪ್ರವೀಣ್, ಎಸ್.ಎ.ಮುರಳೀಧರ್, ಸಪ್ನಾ, ರಜತ್, ಶ್ರೀರಕ್ಷಾ, ಪ್ರತಿಮಾ ರೈ, ನಿಧಿ ಹಾಡಿದರು. ಪುಟಾಣಿಗಳಾದ ಮನ್ಹಾ ಫಾತಿಮಾ, ನಿತ್ಯಾ ನೃತ್ಯ ಮಾಡಿದರು.