ಪೊಲೀಸ್‌-ಸಾರ್ವಜನಿಕರ ಮಧ್ಯೆ ವಿಶ್ವಾಸವಿರಲಿ

KannadaprabhaNewsNetwork |  
Published : Jul 13, 2025, 01:18 AM IST
೧೦ಬಿಎಸ್ವಿ೦೩- ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ಪೊಲೀಸ್ ಇಲಾಖೆಯು ಬುಧವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಿಐ ಗುರುಶಾಂತ ದಾಶ್ಯಾಳ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಪಿಐ ಗುರುಶಾಂತ ದಾಶ್ಯಾಳ ಹೇಳಿದರು.

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ

ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಪಿಐ ಗುರುಶಾಂತ ದಾಶ್ಯಾಳ ಹೇಳಿದರು.

ತಾಲೂಕಿನ ನರಸಲಗಿ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲಾಖೆಯ ಮೇಲೆ ಜನರಲ್ಲಿ ನಂಬಿಕೆ ಬೆಳೆಸುವುದು. ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಸ್ಥಳೀಯರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟಲು ಸಾಧ್ಯ. ಜನರು ಪೊಲೀಸ್ ಇಲಾಖೆಯ ಬಗ್ಗೆ ಯಾವುದೇ ಭಯ ಪಡಬಾರದು. ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ಸಕಾರಾತ್ಮಕವಾದ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದರು.

ಸೈಬರ್ ಅಪರಾಧ ಮತ್ತು ನಕಲಿ ಮಾಹಿತಿ ತಡೆಯುವಲ್ಲಿ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡುವದು ತುಂಬಾ ಮುಖ್ಯವಾಗಿದೆ. ವಿಪತ್ತು ಮತ್ತು ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ನಮ್ಮ ಇಲಾಖೆಯೊಂದಿಗೆ ಸಹಕಾರ ನೀಡುವ ಜೊತೆಗೆ ತಮ್ಮ ಸೇವೆ ನೀಡಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಅವ್ವಪ್ಪಗೌಡ ಬಿರಾದಾರ, ಪಿಕೆಪಿಎಸ್ ಅಧ್ಯಕ್ಷ ಗುರುನಾಥ ದಳವಾಯಿ, ತಾಪಂ ಮಾಜಿ ಅಧ್ಯಕ್ಷ ಶಾಂತಗೌಡ ಹೊಸಳ್ಳಿ, ಗ್ರಾಪಂ ಸದಸ್ಯರಾದ ವಿದ್ಯಾಧರ ದೊಡ್ಡಮನಿ, ಬಸವರಾಜ ಸರಗನಾಳ, ಮೌಲಾಲಿ ಚಪ್ಪರಬಂದ, ಎಎಸ್‌ಐ ತಳವಾರ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಜಗದೀಶ ತಕ್ಕೋಡ, ಶಿವಬಸಪ್ಪ ಮೊಕಾಶಿ, ಬಿ.ಜಿ.ಅಚನೂರ, ಚಾಂದಸಾಬ ಮುಲ್ಲಾ, ರಮೇಶ ಗೂಳಿ, ರಾಜೇಶ್ವರಿ ಶಿರಮಗೊಂಡ ಇತರರು ಇದ್ದರು. ನಂತರ ಗ್ರಾಮದ ಎಂಒಬಿ ಮತ್ತು ಗನ್‌ಗಳ ಬಗ್ಗೆ ಮನೆ ಮನೆಗೆ ತೆರಳಿ ವಿಚಾರಿಸಿ ಪರಿಶೀಲನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌