ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕಲ್ಪಿಸದಿರುವುದಕ್ಕೆ ತೀವ್ರ ಆಕ್ರೋಶ

KannadaprabhaNewsNetwork |  
Published : Jan 30, 2025, 01:45 AM IST
29ಎಚ್‌ವಿಆರ್3- | Kannada Prabha

ಸಾರಾಂಶ

ರಾಣಿಬೆನ್ನೂರ ತಾಲೂಕಿನ ಸುಣ್ಣಕಲ್ಲಬಿದರಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚನೆ ವಿರೋಧಿಸಿ ಮತ್ತು ಭ್ರಷ್ಟಾಚಾರದ ತನಿಖೆಗಾಗಿ ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹಾವೇರಿ: ರಾಣಿಬೆನ್ನೂರ ತಾಲೂಕಿನ ಸುಣ್ಣಕಲ್ಲಬಿದರಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚನೆ ವಿರೋಧಿಸಿ ಮತ್ತು ಭ್ರಷ್ಟಾಚಾರದ ತನಿಖೆಗಾಗಿ ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ನೂರಾರು ವಿದ್ಯಾರ್ಥಿಗಳು ದೂರದ ಊರಿನಿಂದ ಬಂದು ವಸತಿ ನಿಲಯದಲ್ಲಿ ಆಶ್ರಯ ಪಡೆದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. 2012ರಲ್ಲಿ ಪ್ರಾರಂಭವಾದ ವಸತಿ ನಿಲಯ 13 ವರ್ಷ ಕಳೆದರೂ ಸ್ವಂತ ಕಟ್ಟಡ ಇಲ್ಲ ಮತ್ತು ಯಾವುದೇ ಪ್ರಕ್ರಿಯೆಗಳಿಗೂ ಇಲಾಖೆಯ ಮುಂದಾಗಿಲ್ಲ. ಪ್ರಸ್ತುತವಾಗಿ ಬಾಡಿಗೆ ರೂಪದಲ್ಲಿ ದನಕರುಗಳ ಕೂಡಿಹಾಕುವ ತಗಡಿನ ಗೋದಾಮಿನಲ್ಲಿ ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಈವರೆಗೂ ಕನಿಷ್ಠ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲ್ಲ ಎಂದು ದೂರಿದರು.ಹಾಸ್ಟೆಲ್‌ನಲ್ಲಿ 124ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದ ಪೈಕಿ ಕೇವಲ 4 ಬಕೇಟ್, 2 ಚಂಬು, ಮೂರು ಶೌಚಾಲಯ, 3 ಸ್ನಾನದ ಕೊಠಡಿ ಸೇರಿದಂತೆ ವಿಪರೀತವಾದ ಸಮಸ್ಯೆಗಳ ಗೂಡಾಗಿದೆ. ಬಿಸಿಎಂ ಇಲಾಖೆಯಲ್ಲಿ ಬೃಹತ್ ಪ್ರಮಾಣದ ಭ್ರಷ್ಟಾಚಾರ ಮತ್ತು ಅಧಿಕಾರಗಳಿಗೆ ಬಿಲ್ ಮಾಡಲು ಲಂಚ ನಡೆದಿದೆ ಎಂಬುದಾಗಿ ಈ ಹಾಸ್ಟೆಲ್ ಅವ್ಯವಸ್ಥೆಯೇ ಸಾಕ್ಷಿಯಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪ್ರಕರಣ ದಾಖಲಿಸಿ ಈವರೆಗೂ ಹಾಸ್ಟೆಲ್‌ಗೆ ಬಿಡುಗಡೆಯಾದ ಅನುದಾನ, ಸೌಲಭ್ಯಗಳನ್ನು ಬಹಿರಂಗ ಪಡಿಸಬೇಕು. ಕೂಡಲೇ ಬೇಡಿಕೆಯ ಪಟ್ಟಿಯ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಹಾಗೂ ಸ್ವಂತ ಕಟ್ಟಡ ಒದಗಿಸಬೇಕು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉನ್ನತ ಅಧಿಕಾರಿಗಳು ಭೇಟಿ ನೀಡಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡಲಾಗುವುದು ಎಂದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಮೊಬೈಲ್‌ನಲ್ಲಿ ತೆಗೆದ ಹಾಸ್ಟೆಲ್ ಅವ್ಯವಸ್ಥೆಯ ಛಾಯಾಚಿತ್ರಗಳನ್ನು ವೀಕ್ಷಿಸಿದ ಅವರು ಚರ್ಚಿಸಿ ಕೂಡಲೇ ಸಂಪೂರ್ಣ ಮಾಹಿತಿ ಒದಗಿಸಿ ಸೂಕ್ತ ಕ್ರಮ ಕೈಗೊಳ್ಳಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಬಿಸಿಎಂ ಜಿಲ್ಲಾ ಅಧಿಕಾರಿ ಕೆ.ಎನ್. ಪ್ರವೀಣ್ ಮಾತನಾಡಿ, ಸಮಸ್ಯೆಗಳ ಕುರಿತು ಸಮಗ್ರ ವರದಿ ಒದಗಿಸಲು ತಾಲೂಕಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಶೀಘ್ರವಾಗಿ ಕಟ್ಟಡವನ್ನು ಸ್ಥಳಾಂತರ ಮಾಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಹಾಸ್ಟೆಲ್ ಘಟಕ ಅಧ್ಯಕ್ಷ ರೇವಣಸಿದ್ದೇಶ ವಿ, ಮುಖಂಡ ನವೀನ ಎಚ್.ಎಂ., ಅಭಿಷೇಕ್ ಎಸ್.ಎಂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ