ಬೀಜ, ಗೊಬ್ಬರದ ಕೊರತೆ ಆಗದು: ಬಸವರಾಜ ರಾಯರಡ್ಡಿ

KannadaprabhaNewsNetwork |  
Published : May 27, 2025, 12:08 AM ISTUpdated : May 27, 2025, 12:09 AM IST
26ಕೆಕೆಆರ್1:ಕುಕನೂರಿನ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಯಲಬುರ್ಗಾ ಸಹಾಯಕ ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ಯಲಬುರ್ಗಾ, ಕುಕನೂರು ತಾಲೂಕಿನ ಒಟ್ಟು 3.16 ಲಕ್ಷ ಎಕರೆ ಸಾಗುವಳಿ ಭೂಮಿಯಲ್ಲಿ 2.19 ಲಕ್ಷ ಎಕರೆ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ. ಒಟ್ಟು 8 ಕಡೆ ಬೀಜ ಮಾರಾಟ ಕೇಂದ್ರ ತೆರಯಲಾಗಿದೆ. ಬೇಡಿಕೆಗೆ ತಕ್ಕಷ್ಟು ಬೀಜಗಳನ್ನು ರೈತರಿಗೆ ನೀಡಲು ತರಿಸಲಾಗಿದೆ.

ಕುಕನೂರು:

ಯಲಬುರ್ಗಾ ಕ್ಷೇತ್ರದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರೆತ ಆಗದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಯಲಬುರ್ಗಾ ಸಹಾಯಕ ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ರೈತರಿಗೆ ಬಿತ್ತನೆಗೆ ಅವಶ್ಯವಾಗಿರುವ ಬೀಜ, ಗೊಬ್ಬರದ ಪೂರೈಕೆ ಮಾಡುತ್ತಿದೆ. ರೈತ ಸಂಪರ್ಕ ಕೇಂದ್ರ ಮೂಲಕ ರಿಯಾಯಿತಿ ದರದಲ್ಲಿ ಬೀಜ, ಗೊಬ್ಬರ ವಿತರಿಸುತ್ತಿದೆ. ಬೇಡಿಕೆಗೆ ತಕ್ಕಷ್ಟು ಪೂರೈಕೆ ಮಾಡಲಾಗುತ್ತಿದೆ. ಉತ್ತಮ ಮಳೆ ಸುರಿದಿದ್ದು ರೈತರು ಉತ್ತಮ ಬೆಳೆ ಬೆಳೆಯಬೇಕು. ರೈತ ವರ್ಗಕ್ಕೆ ಅಗತ್ಯವಾಗಿರುವ ಅನುಕೂಲಗಳನ್ನು ಸರ್ಕಾರ ಕಲ್ಪಿಸುತ್ತಿದೆ ಎಂದರು.

ಯಲಬುರ್ಗಾ ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಮಾತನಾಡಿ, ಯಲಬುರ್ಗಾ, ಕುಕನೂರು ತಾಲೂಕಿನ ಒಟ್ಟು 3.16 ಲಕ್ಷ ಎಕರೆ ಸಾಗುವಳಿ ಭೂಮಿಯಲ್ಲಿ 2.19 ಲಕ್ಷ ಎಕರೆ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ. ಒಟ್ಟು 8 ಕಡೆ ಬೀಜ ಮಾರಾಟ ಕೇಂದ್ರ ತೆರಯಲಾಗಿದೆ. ಬೇಡಿಕೆಗೆ ತಕ್ಕಷ್ಟು ಬೀಜಗಳನ್ನು ರೈತರಿಗೆ ನೀಡಲು ತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕುಕನೂರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಾದ ಬಸವರಾಜ ತೇರಿನ, ಸಿದ್ರಾಮರೆಡ್ಡಿ, ಶಿವಾನಂದ ಮಳಗಿ, ಗೂಳಪ್ಪ ಕೋಳಜಿ, ಪ್ರಮುಖರಾದ ಹನುಮಂತಗೌಡ ಚಂಡೂರು, ಸಿದ್ದಯ್ಯ ಕಳ್ಳಿಮಠ, ಸಂಗಮೇಶ ಗುತ್ತಿ, ಪಪಂ ಸದಸ್ಯರಾದ ಸಿರಾಜ ಕರಮುಡಿ, ರಾಮಣ್ಣ ಬಂಕದಮನಿ, ಮಹೇಶ ಗಾವರಾಳ, ನಿಂಗಪ್ಪ ಗೊರ್ಲೆಕೊಪ್ಪ ಇತರರಿದ್ದರು.1500 ಟನ್‌ ಗೊಬ್ಬರ ನೀಡಿ...

ಡಿಎಪಿ ಗೊಬ್ಬರದ ಅವಶ್ಯಕತೆ ಇದೆ ಎಂದು ರೈತರು ಬಸವರಾಜ ರಾಯರಡ್ಡಿ ಅವರಿಗೆ ತಿಳಿಸಿದಾಗ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಕರೆ ಮಾಡಿ ಕ್ಷೇತ್ರಕ್ಕೆ 1500 ಟನ್‌ ಡಿಎಪಿ ಗೊಬ್ಬರ ಪೂರೈಕೆ ಮಾಡಲು ಕೋರಿದರು. ಸಚಿವರು ಒಂದು ಸಾವಿರ ಟನ್ ನೀಡುವ ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ