ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಕೊಲೆ ಆರೋಪಿಯ ಕೇಸನ್ನು ಸರ್ಕಾರ ವಾಪಸ್ ತೆಗೆದುಕೊಳ್ತೀನಿ ಅಂದ್ರೆ ಅರಾಜಕತೆ ಉಂಟಾಗುತ್ತದೆ. ಹೈಕೋರ್ಟ್‌ನಲ್ಲಿ ನಮ್ಮ ವಕೀಲರು ವಾದ ಮಂಡನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಅವರ ವಕೀಲರು ವಾದ ಮಂಡನೆ ಮಾಡುತ್ತಾರೆ ಎಂದು ಹೇಳಿದರು.
ಕೆಲ ಬೀದಿನಾಯಿಗಳಿಗೆ ನಾನು ಉತ್ತರ ಕೊಡುವುದಿಲ್ಲ. ಹಂದಿಗಳು ಹಾಗೇ ಒದರುತ್ತಾ ಬರುತ್ತವೆ, ಹೋಗುತ್ತವೆ. ಹಂದಿಗಳನ್ನು ಏನೂ ಕೇಳಬಾರದು ಎಂದರು. ತಮ್ಮ ವಿರುದ್ಧ ಮಾಜಿ ಸಚಿವ ಮುರಗೇಶ ನಿರಾಣಿ ಶುಕ್ರವಾರ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದರು.ಮೈಸೂರು ಮಹಾರಾಜರ ದೂರ ದೃಷ್ಟಿಯಿಂದ ಮೈಸೂರು ಅಭಿವೃದ್ಧಿ ಯಾಗಿದೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ಬಿಜೆಪಿ, ಹಿಂದೂ ಕಾರ್ಯಕರ್ತ ಮೇಲೆ ದೌರ್ಜನ್ಯ ವಿಚಾರವಾಗಿ ಮಾತನಾಡಿದ ಅವರು, ದೌರ್ಜನ್ಯಕ್ಕೆ ಒಳಗಾಗದ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ನೆರವಿಗೆ ಬಿಜೆಪಿ ಇದೆ. ಅವರ ಕಾನೂನು ಹೋರಾಟಕ್ಕೆ ನೆರವು ನೀಡುತ್ತೇವೆ. ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿ ಆಫೀಸ್ ತೆರೆಯಲಾಗುತ್ತಿದೆ. ಅವರನ್ನು ಸ್ಟೇಷನ್‌ಗೆ ಕರೆಸಿ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳುತ್ತಿದ್ದಾರೆ. ಈ ದೌರ್ಜನ್ಯ ನಾವು ಸಹಿಸಲ್ಲ. ಪ್ರಚೋದನೆ ಮಾಡಿದ್ದರೆ ಬೇಕಾದರೆ ಕ್ರಮ ಕೈಗೊಳ್ಳಲಿ. ವಾಕ್ ಸ್ವಾತಂತ್ರ್ಯ ಇದೆ, ಅಭಿವ್ಯಕ್ತಿ ಸ್ವಾತಂತ್ರ್ಯ ತಡೆಯುವ ಅವಕಾಶ ಇಲ್ಲ. ವಿನಾಕಾರಣ ದೌರ್ಜನ್ಯ ಸರಿ ಅಲ್ಲ ಎಂದರು.