ಕೆಳಗೆ ಬಿದ್ದ ಮೊಬೈಲ್‌ ಕೊಡಲೋದಯುವಕನಿಗೆ ಕಳ್ಳನೆಂದು ಥಳಿಸಿದ್ರು

KannadaprabhaNewsNetwork |  
Published : Oct 24, 2026, 02:00 AM IST
ರೆಹಾನ್‌  | Kannada Prabha

ಸಾರಾಂಶ

ಮೊಬೈಲ್ ಕಳ್ಳನೆಂದು ತಪ್ಪಾಗಿ ಭಾವಿಸಿ ಯುವಕನ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಪ್ರಕರಣದ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ 8 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೊಬೈಲ್ ಕಳ್ಳನೆಂದು ತಪ್ಪಾಗಿ ಭಾವಿಸಿ ಯುವಕನ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಪ್ರಕರಣದ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ 8 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಫುಟ್‌ಪಾತ್‌ ವ್ಯಾಪಾರಿ ಶಾಹಿದ್‌ (19) ಹಲ್ಲೆಗೊಳಗಾದವನು. ಶಾಹಿದ್‌ ಎಂಬಾತ ನೀಡಿದ ದೂರಿನನ್ವಯ 8 ಮಂದಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅ.20 ಸಿಟಿ ಮಾರ್ಕೆಟ್‌ನ ಆರ್.ಟಿ.ಸ್ಟ್ರೀಟ್‌ನಲ್ಲಿ ಪಾದಚಾರಿಯೊಬ್ಬ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗುವಾಗ ಅವರಿಗೆ ಬೈಕ್‌ವೊಂದು ತಾಗಿ ಮೊಬೈಲ್ ಕೆಳಗೆ ಬಿದ್ದಿದೆ. ಕೂಡಲೇ ಆ ಮೊಬೈಲ್ ಅನ್ನು ತೆಗೆದುಕೊಡಲು ಶಾಹಿದ್ ಮುಂದಾಗುತ್ತಿದ್ದಂತೆ ಆತನನ್ನು ಮೊಬೈಲ್ ಕಳ್ಳನೆಂದು ತಪ್ಪಾಗಿ ಭಾವಿಸಿದ ಸ್ಥಳೀಯರು ಮನಬಂದಂತೆ ಅಟ್ಟಾಡಿಸಿಕೊಂಡು ಥಳಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿದ್ದ ಶಾಹಿದ್‌ ಆಸ್ಪತ್ರೆಗೆ ಚಿಕಿತ್ಸೆ ಪಡೆದಿದ್ದಾರೆ.

ಈ ಬಗ್ಗೆ ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಎಂಟು ಮಂದಿ ವಿರುದ್ಧ ಎಫ್‌ಐಆ‌ರ್ ದಾಖಲಿಸಿಕೊಂಡು ಘಟನಾ ಸ್ಥಳದಲ್ಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಯ ದೃಶ್ಯ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ
ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಶೇ.86.50ರಷ್ಟು ಮತದಾನ