ಜಿಲ್ಲಾಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ

KannadaprabhaNewsNetwork |  
Published : Jun 19, 2026, 03:00 AM IST
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ದ್ರಾವಿಡ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ | Kannada Prabha

ಸಾರಾಂಶ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿ ವೇತನಗಳ ತ್ವರಿತ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ವಿರೋಧಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿ ವೇತನಗಳ ತ್ವರಿತ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ವಿರೋಧಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾತ್ಮ ಗಾಂಧಿ ಸರ್ಕಲ್‌ನಿಂದ ಡಾ.ಅಂಬೇಡ್ಕರ್‌ ಸರ್ಕಲ್‌ ವರೆಗೆ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ ಮಾತನಾಡಿ, ರಾಜ್ಯಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಸರ್ಕಾರ ಮತ್ತು ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆರೋಪಿಸಿದರು.

ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳು ಸಮರ್ಪಕವಾಗಿ ಬಿಡುಗಡೆಯಾಗದಿರುವುದು ಆಡಳಿತಾತ್ಮಕ ವೈಫಲ್ಯದ ಸಂಕೇತವಾಗಿದೆ. ಅನೇಕ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲಿ ಕಂಪ್ಯೂಟರ್‌ ಲ್ಯಾಬ್, ಸ್ಮಾರ್ಟ್ ಬೋರ್ಡ್, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಮೂಲಭೂತ ಶೈಕ್ಷಣಿಕ ಸೌಲಭ್ಯಗಳ ಕೊರತೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಪರೀಕ್ಷೆಗಳು ಸಕಾಲದಲ್ಲಿ ನಡೆಯದೇ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದು, ಸರಿಯಾದ ಮಾರ್ಗದರ್ಶನದ ಕೊರತೆಯಿಂದ ಅನೇಕ ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಗೌಡಪ್ಪ ಬಡಿಗೇರ, ಅಮೃತ, ಸುನಿಲ, ಪ್ರತಾಪ ತೊಳನೂರ, ಮಂಜುನಾಥ ಕವಳಿ, ಆದರ್ಶ, ಸಂದೇಶ ಕುಮಟಗಿ, ಭೀಮು ಬಡಿಗೇರ, ನಿಂಗು ವಾಲಿಕಾರ, ಸಾಯಬಣ್ಣ ನಾಯಕೋಡಿ, ದರ್ಶನ, ಸಚಿನ, ಗಣೇಶ, ಪಾರ್ವತಿ ಬಿರಾದಾರ, ವಿದ್ಯಾ ಹಂಡೇಕರ, ಸ್ನೇಹಾ, ಭಾಗ್ಯ, ಉಜ್ಮಾ, ಕೋಮಲ ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉನ್ನತ ಹುದ್ದೆಗಳಲ್ಲಿ ಶಿಕ್ಷಕ ಹುದ್ದೆ ಅತ್ಯಂತ ಶ್ರೇಷ್ಠ
ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಠಾಣೆಗೆ ದೂರು