ಮಹಿಳೆಯ ಮಾಂಗಲ್ಯದ ಸರ ಕಿತ್ತುಕೊಂಡು ಕಳ್ಳರು ಪರಾರಿ

KannadaprabhaNewsNetwork |  
Published : Apr 11, 2025, 12:33 AM IST
ಪೋಟೊ೧೦ಸಿಪಿಟಿ೧: ಸರ ಕಿತ್ತುಕೊಂಡ ಹೋದ ಕಳ್ಳರನ್ನು ಹಿಡಿಯುವಂತೆ ಮಹಿಳೆಯರು ಕೂಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. | Kannada Prabha

ಸಾರಾಂಶ

ಮೂವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯಲ್ಲಿ ಯಾರೂ ಇಲ್ಲವೆಂದು ಖಾತ್ರಿ ಪಡಿಸಿಕೊಂಡ ಬಳಿಕ ವಾಪಸ್ ಬಂದು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಚನ್ನಪಟ್ಟಣ: ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರು ದೇವಸ್ಥಾನದಿಂದ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ನಗರದ ಕೋಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ನಗರದ ಮಂಟೇಸ್ವಾಮಿ ಮಠದ ಬೀದಿಯ ನಿವಾಸಿ ಇಂದಿರಾ ಎಂಬುವವರ ೭೦ ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ತಮ್ಮ ಸ್ನೇಹಿತೆಯರೊಡನೆ ಕೋಟೆಯ ವರದರಾಜ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಾಪಸ್ ಮನೆಗೆ ಮರಳುವಾಗ ಈ ಘಟನೆ ಸಂಭವಿಸಿದೆ. ಮೂವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯಲ್ಲಿ ಯಾರೂ ಇಲ್ಲವೆಂದು ಖಾತ್ರಿ ಪಡಿಸಿಕೊಂಡ ಬಳಿಕ ವಾಪಸ್ ಬಂದು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಎಲ್ಲಾ ಘಟನೆ ಎದುರು ಮನೆಯ ಸಿಸಿಟಿವಿಯಲ್ಲಿ ಸಂಪೂರ್ಣ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಪುರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ