ಕುಟುಂಬದ ಒಬ್ಬರಿಗೆ ಉದ್ಯೋಗಕ್ಕೆ ಚಿಂತನೆ: ಸಚಿವ ಕೆ.ಎಚ್ ಮುನಿಯಪ್ಪ

KannadaprabhaNewsNetwork |  
Published : Aug 29, 2024, 12:52 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ನಲ್ಲಿ ನಡೆದ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಕುಟುಂಬದ ಒಬ್ಬರಿಗೆ ಉದ್ಯೋಗಕ್ಕೆ ಚಿಂತನೆ: ಸಚಿವ ಕೆ.ಎಚ್ ಮುನಿಯಪ್ಪ

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಕುಟುಂಬಗಳಿವೆ. ಪ್ರತಿ ಕುಟುಂಬದಲ್ಲಿ ಅರ್ಹ ಒಬ್ಬರಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಆಶಯದಿಂದ ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಚ್.ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ನಲ್ಲಿ ನಡೆದ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಅವರು ‌ಮಾತನಾಡಿದರು.ಒಂದು‌ ಕುಟುಂಬಕ್ಕೆ ಒಂದು ಕೆಲಸ ಸಿಗಬೇಕು ಎಂಬ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು 09 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿದೆ. ಉದ್ಯೋಗ ‌ಮೇಳಕ್ಕೂ‌ ಮುನ್ನ ಎಷ್ಟು ಕುಟುಂಬದಲ್ಲಿ ಕೆಲಸ ಇದೆ. ಎಷ್ಟರಲ್ಲಿ ಕೆಲಸವಿಲ್ಲ ಎಂಬ ಮಾಹಿತಿ ಸಂಗ್ರಹಿಸಲಾಗುವುದು. ಹಾಗಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಎಂದರು. ಇದುವರೆಗೂ ಉದ್ಯೋಗ ಮೇಳಕ್ಕೆ 50 ಕಂಪನಿಗಳು ನೊಂದಣಿಯಾಗಿದೆ. 100 ಕ್ಕೂ ಅಧಿಕ ಕಂಪನಿಗಳು‌ ನೋಂದಣಿಯಾಗುವ ನಿರೀಕ್ಷೆ ಇದೆ. ಈವರೆಗೆ 1110 ಉದ್ಯೋಗಾಂಕ್ಷಿಗಳು ನೊಂದಣಿಯಾಗಿದ್ದಾರೆ. ಇನ್ನು ನೋಂದಣಿ ಹೆಚ್ಚಿಸಲು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು , ಜನಪ್ರತಿನಿಧಿಗಳು ಮುಖಂಡರು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಇದುವರೆಗೂ ಕಂಪನಿಗಳಿಂದ ಸುಮಾರು 2000 ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಬಂದಿದೆ. ಉದ್ಯೋಗಾಂಕ್ಷಿಗಳಿಗೆ ಯಾವುದೇ ತಾಂತ್ರಿಕ ಅಥವಾ ತಾಂತ್ರಿಕೇತರ ಪದವಿ ಹೊಂದಿದ್ದರು ಅರ್ಹರಿಗೆ ತರಬೇತಿಯ ಜೊತೆಗೆ ಉದ್ಯೋಗ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು.ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದ್ದು,ನಗರಸಭೆ,ಪುರಸಭೆಗಳ ಮೂಲಕ ನಗರ ಪ್ರದೇಶಗಳಲ್ಲಿ ಪ್ರಚಾರ ಕೈಗೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 100 ನಿಯೋಜಕರು, ಕಂಪನಿಗಳು ಭಾಗವಹಿಸಲ್ಲಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಉದ್ಯೋಗಾಂಕ್ಷಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿಗಳಲ್ಲಿಯೂ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಸೇರಿದಂತೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಸ್ಥಳೀಯ ಅಧಿಕಾರಿಗಳು , ಸ್ವಚ್ಚತಾ ವಾಹಿನಿ, ಆಟೋಗಳ ಮೂಲಕ ಜಾಗೃತಿ ‌ಮೂಡಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ರಾಜಣ್ಣ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಶಾಂತಕುಮಾರ್, ಎಸ್ಪಿ ಸಿ.ಕೆ ಬಾಬಾ, ಎ.ಸಿ ದುರ್ಗಶ್ರೀ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ