ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ತೀರಾ ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಬಿದ್ದರೆ ಮಾತ್ರವೇ ಎನ್.ಐ.ಎ ಗೆ ವಹಿಸಲಾಗುವುದು. ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿಲ್ಲ: ಸಿದ್ದರಾಮಯ್ಯ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ತೀರಾ ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಬಿದ್ದರೆ ಮಾತ್ರವೇ ಎನ್.ಐ.ಎ ಗೆ ವಹಿಸಲಾಗುವುದು. ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರ ಕೆಫೆ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿಲ್ಲ. ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಲ್ಲಿ ಜನರ ಸುರಕ್ಷತೆ ಅತಿ ಮುಖ್ಯವಾದ ವಿಷಯದ. ಸಿಸಿಬಿಗೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ. ಆರೋಪಿ ಇನ್ನೂ ಸಿಕ್ಕಿಲ್ಲ ಎಂದರು. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರ ವಾಗಿ ಪರಿಗಣಿಸಿದೆ ಎಂದು ಹೇಳಿದರು. ಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು ಎಂದ ಅವರು, ಇದು ಎನ್.ಐ.ಎ, ಆರ್‌ಎಡಬ್ಲ್ಯೂ ಅವರ ವೈಫಲ್ಯವಲ್ಲವೇ ಎಂದು ಪ್ರಶ್ನಿಸಿದರು. ನಾನು ಸ್ಪೋಟವನ್ನು ಸಮರ್ಥನೆ ಮಾಡಿಕೊಳ್ಳುವುದಿಲ್ಲ, ಖಂಡಿಸುತ್ತೇನೆ. ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದ ಅವರು, ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟವಾಗಿತ್ತು. ಆಗ ಬಿಜೆಪಿ ಅಧಿಕಾರದಲ್ಲಿತ್ತು ಎಂದರು.ಆರ್.ಅಶೋಕ್ ಏನಾದರೂ ಮಾಡಿ ಕಾಂಗ್ರೆಸ್ ಗೆ ಮತ ಹಾಕಿ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮತ ನೀಡಿ ಎಂದು ಕೇಳಿರಬಹುದು, ಏನಾದರೂ ಮಾಡಿ ಎಂದು ಕೇಳುತ್ತಾರೆಯೇ ಎಂದು ಪ್ರಶ್ನಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.