ಕನ್ನಡಪ್ರಭ ವಾರ್ತೆ ಹಾಸನ
ಅರಕಲಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಈ ಯೋಜನೆ ಸದ್ಯದಲೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದರು. ಅರಕಲಗೂಡು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹ ಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗೆ ಅರಕಲಗೂಡು ತಾಲೂಕು ೯೯% ಗುರಿ ಸಾಧಿಸಿದೆ ಎಂದು ಪುಷ್ಪ ಅಮರನಾಥ್ ಅವರು ತಿಳಿಸಿದರು. ಬಸ್ ನಿಲ್ದಾಣದ ಸ್ವಚ್ಛತೆ ಕಾಯ್ದುಕೊಳ್ಳಬೇಕು, ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಗತ್ಯವಿದ್ದಲ್ಲಿ ಹೆಚ್ಚಿನ ಬಸ್ಸುಗಳನ್ನು ನಿಯೋಜಿಸುವಂತೆ ತಿಳಿಸಿದರು.
ಅರಕಲಗೂಡು ತಾಲೂಕಿನಲ್ಲಿ ಶೇ. ೯೯ರಷ್ಟು ಗುರಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.ಈ ವೇಳೆಯಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅರಕಲಗೂಡು ತಾಲೂಕು ಅಧ್ಯಕ್ಷರಾದ ಶ್ರೀಧರ್ ಗೌಡ, ತಹಶೀಲ್ದಾರ್ ಸೌಮ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.