ಬಳ್ಳಾರಿ: ನಗರದ ಆಯ್ದ 10 ಪಾರ್ಕ್''''''''ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವ್‌ಮೆಂಟ್ ಸಂಸ್ಥೆಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿಯಾಗಿದೆ. ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ. ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ. ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬೇಕು.ನಗರದ ಪಾರ್ಕ್‌ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು. ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದು ಹೇಳಿದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.
ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಗಡಿಯಾರ ಗೋಪುರ ಕಾಮಗಾರಿಯನ್ನು ಶಾಸಕ ನಾರಾ ಭರತ್ ರೆಡ್ಡಿ ಪರಿಶೀಲಿಸಿದರು.
ಕಾಮಗಾರಿ ಉದ್ಘಾಟನೆಗೆ ಸಮಯಾವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೋರಲಾಗಿದ್ದು, ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿದಲ್ಲಿ ಸಾರ್ವಜನಿಕರಿಗೂ ಅನುಕೂಲ ಮಾಡಿ ಕೊಟ್ಟಂತಾಗುತ್ತದೆ ಎಂದರು.