ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್‌ಗಳಿಗೆ ಕಡಿವಾಣ ಹಾಕಲು ಚಿಂತಿಸಲಾಗಿದೆ. ಇಂಥ ಲೇಔಟ್‌ಗಳಿಂದ ಸಾರ್ವಜನಿಕರು ಯಾವುದೇ ನಿವೇಶನಗಳನ್ನು ಖರೀದಿ ಮಾಡದಂತೆ ಶಾಸಕ ಕೆ.ಎಂ.ಉದಯ್ ಗುರುವಾರ ಎಚ್ಚರಿಸಿದರು.ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಹೊಸ ಅನಧಿಕೃತ ಬಡಾವಣೆಗಳ ನಿವೇಶನಗಳಿಗೆ ಯಾವುದೇ ಕಾರಣಕ್ಕೂ ಖಾತೆ ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದರು. ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್‌ಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನಿವೇಶನಗಳನ್ನು ಖರೀದಿ ಮಾಡಬಾರದು. ಒಂದು ವೇಳೆ ಸಾರ್ವಜನಿಕರು ಅನಧಿಕೃತ ಲೇಔಟ್‌ಗಳಿಂದ ನಿವೇಶಗಳನ್ನು ಖರೀದಿ ಮಾಡಿದ್ದೆ ಆದಲ್ಲಿ ಪುರಸಭೆಯಿಂದ ಯಾವುದೇ ಮೂಲ ಸೌಲಭ್ಯ ದೊರಕುವುದಿಲ್ಲ ತಿಳಿಸಿದರು.
ಪುರಸಭೆ ವ್ಯಾಪ್ತಿ ಯಾವುದೇ ಕಟ್ಟಡ ನಿರ್ಮಾಣ ಮಾಡಬೇಕಾದಲ್ಲಿ ಬಿಎಂಐಸಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ರದ್ದುಗೊಳಿಸಲು ಕೆಲವೊಂದು ಕಾನೂನು ತೊಡಕುಗಳು ಉಂಟಾಗಿದೆ. ಇದನ್ನು ಪರಿಹರಿಸುವ ಪ್ರಯತ್ನ ನಡೆದಿದೆ ಎಂದು ಸ್ಪಷ್ಟಪಡಿಸಿದರು.ಪಟ್ಟಣವನ್ನು ನಗರಸಭೆಯಾಗಿ ಮೇಲ್ದರ್ಜೆ ಗೇರಿಸುವ ಆದೇಶವನ್ನು ಸರ್ಕಾರ ಶೀಘ್ರದಲ್ಲೇ ಹೊರಡಿಸಲಿದೆ. ನಗರಸಭೆಯಾಗಿ ಪರಿವರ್ತನೆಗೊಂಡ ನಂತರ ಗೊರವನಹಳ್ಳಿ, ಚಾಮನಹಳ್ಳಿ, ಗೆಜ್ಜಲಗೆರೆ ಹಾಗೂ ಸೋಮನಹಳ್ಳಿ ಗ್ರಾಮಗಳನ್ನು ನಗರಸಭೆ ವ್ಯಾಪ್ತಿಗೆ ಒಳಪಡಿಸಿಕೊಂಡು ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಹೊಸದಾಗಿ ನಿರ್ಮಾಣವಾಗುತ್ತಿರುವ ಅನಧಿಕೃತ ಲೇಔಟ್ ಗಳಿಗೆ ಮೂಲ ಸೌಲಭ್ಯ ಗಳನ್ನು ಕಲ್ಪಿಸಲು ಕಡಿವಾಣ ಹಾಕಲಾಗುವುದು ಎಂದು ಪುನರುಚ್ಚರಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಇದ್ದರು.ಉಪ್ಪು ತಿಂದವರು ನೀರು ಕುಡಿಯಲೇಬೇಕುಮದ್ದೂರು:
ಸರ್ಕಾರಿ ಜಮೀನು ಒತ್ತುವರಿ ಸಂಬಂದ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಶಾಸಕ ಕೆ.ಎಂ. ಉದಯ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ ತಮ್ಮಣ್ಣ ವಿರುದ್ಧ ವ್ಯಂಗ್ಯವಾಡಿದರು.ರಾಮನಗರ ಜಿಲ್ಲೆ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಕೊಂಡಿರುವುದನ್ನು ತೆರವುಗೊಳಿಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸಿದ ಅವರು, ಈ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂಬ ಗಾದೆ ಮಾತನ್ನು ಉಲ್ಲೇಖಿಸಿದರು. ಅಧಿಕಾರಿಗಳು ಒತ್ತುವರಿ ಜಮೀನನ್ನು ತೆರವುಗೊಳಿಸುವ ಮೂಲಕ ಜೈಲು ಶಿಕ್ಷೆಯಿಂದ ಪಾರಾಗಬೇಕು ಎಂದು ಸಲಹೆ ನೀಡಿದರು.