ಕನ್ನಡಪ್ರಭ ವಾರ್ತೆ ಮಂಗಳೂರು
ಅವರು ಬುಧವಾರ ನಗರದ ವಿಶ್ವಕೊಂಕಣಿ ಕೇಂದ್ರದಲ್ಲಿ ಎರಡು ದಿನಗಳ ವಿಶ್ವಕೊಂಕಣಿ ಸಮಾರೋಹ- ೨೦೨೪, ವಿಶ್ವ ಕೊಂಕಣಿ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದರು.
ಕರಾವಳಿಯ ನೆಲ, ಪರಿಸರದಲ್ಲಿ ಸಾಹಿತ್ಯ, ಭಾಷೆಯ ಸೊಡಗು ಶ್ರೀಮಂತವಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕವಿ ರವೀಂದ್ರನಾಥ ಟಾಗೋರರು ತಮ್ಮ ಗೀತಾಂಜಲಿ ಕೃತಿಯನ್ನು ಕಾರವಾರದ ನೆಲದಲ್ಲಿ ರಚಿಸಿದ್ದರು ಎನ್ನಲಾದ ಸಂದರ್ಭವನ್ನು ಅವರು ವಿವರಿಸಿದರು.ಉದ್ಯಮಿ ಡಾ.ಪಿ. ದಯಾನಂದ ಪೈ , ಟಿ.ವಿ. ಮೋಹನದಾಸ ಪೈ ಅವರ ಶುಭಾಶಂಸನೆಯ ಸಂದೇಶವನ್ನು ಕಾರ್ಯಕ್ರಮದಲ್ಲಿ ನೇರ ಪ್ರಸಾರ ಮಾಡಲಾಯಿತು.
ಸಮಾರಂಭದಲ್ಲಿ ವಿಶ್ವ ಕೊಂಕಣಿ ಕೇಂದ್ರದ ಆಧ್ಯಕ್ಷ ನಂದಗೋಪಾಲ್ ಶೆಣೈ ಸ್ವಾಗತಿಸಿದರು. ಕೊಂಕಣಿ ಭಾಷಿಗರ ಅಂದಿನ ವಲಸೆಗಿಂತ ಇಂದು ಉದ್ಯೋಗ ನಿಮಿತ್ತ ತಾಯ್ನೆಲ, ಸಂಸ್ಕೃತಿಯಿಯಿಂದ ದೂರವಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಆರ್ಥಿಕವಾಗಿ ದೇಶ ಉನ್ನತ ಸ್ಥಾನಕ್ಕೇರುವಾಗ ನಮ್ಮ ಕೊಂಕಣಿ ಸಮುದಾಯವೂ ಉನ್ನತ ಸ್ಥಾನಕ್ಕೇರುವ ನಿಟ್ಟಿನಲ್ಲಿ ನಾವು ತ್ಪರಿತವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ, ಡಾ. ಕಿರಣ್ ಬುಡ್ಕುಳೆ, ಗಿಲ್ಬರ್ಟ್ ಡಿಸೋಜ, ಕೋಶಾಧಿಕಾರಿ ಬಿ.ಆರ್. ಭಟ್, ವಿಶ್ವಸ್ಥ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿ ಡಾ.ಬಿ. ದೇವದಾಸ ಪೈ ಉಪಸ್ಥಿತರಿದ್ದರು. ಸ್ಥಾಪಕ ಟ್ರಸ್ಟಿ ವಿಲಿಯಂ ಡಿಕೋಸ್ತಾ ಅವರನ್ನು ಗೌರವಿಸಲಾಯಿತು. ವಿದುಷಿ ಮೇಘಾ ಪೈ ಕೊಂಕಣಿ ಆಶಯಗೀತೆ ಹಾಡಿದರು.ಡಾ. ಕಿರಣ್ ಬುಡ್ಕುಳೆ, ಸುಚಿತ್ರಾ ಶೆಣೈ, ವತಿಕಾ ಕಾಮತ್ ಅತಿಥಿಗಳನ್ನು ಪರಿಚಯಿಸಿದರು. ಸ್ಮಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಡಾ. ಕಸ್ತೂರಿ ಮೋಹನ್ ಪೈ ವಂದಿಸಿದರು. ಸಂಭ್ರಮದ ಸಮಾರೋಹ: ಮಾಹೆ ವಿ.ವಿ.ಯ ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ವಿಶ್ವಕೊಂಕಣಿ ಸಮಾರೋಹವನ್ನು ಉದ್ಘಾಟಿಸಿ ಕೊಂಕಣಿ ಕೀರ್ತಿ ಮಂದಿರದಲ್ಲಿ ಚಲನಚಿತ್ರ ಕಲಾವಿದೆ ಪಂಢರಿಬಾಯಿ ಅವರ ಭಾವಚಿತ್ರ ಅನಾವರಣ ಮಾಡಿದರು. ಗೋವಾದ ರಂಗಕರ್ಮಿ ಪುಂಡಲೀಕ ನಾಯಕ್, ಗೋವಾ ವಿ.ವಿ. ಕೊಂಕಣಿ ವಿಭಾಗದ ಪ್ರಾಧ್ಯಾಪಕ ಡಾ. ಹನುಮಂತ ಚೊಪ್ಡೇಕರ್ ಸಂಪಾದಕತ್ವದ ‘ಕೊಂಕಣಿ ರಂಗ ಭೂಮಿಯ ಇತಿಹಾಸ’ ಸಂಶೋಧನಾ ಕೃತಿ, ಡಾ.ಬಿ. ದೇವದಾಸ ಪೈ ಅವರ ಕೊಂಕಣಿ ಭಾಷಾ ವಿಜ್ಞಾನದ ದೀರ್ಘಾವಧಿ ಸಂಶೋಧನೆಯ ಪ್ರಥಮ ಹಂತದ ಸಂಶೋಧನಾ ವರದಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ವಿಶ್ವ ಕೊಂಕಣಿ ಕೇಂದ್ರದ ಅಂತರ್ಜಾಲ ಚಾನೆಲ್ ಮೂಲಕ ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ರೂಪಿಸಿದ ಶಕುಂತಲಾ ಆರ್. ಕಿಣಿ, ಬಸ್ತಿ ಶೋಭಾ ಶೆಣೈ, ಸುಚಿತ್ರಾ ಎಸ್. ಶೆಣೈ ಅವರನ್ನು ಗೌರವಿಸಲಾಯಿತು. ಎರಡು ದಿನಗಳ ಈ ಸಮಾರೋಹ ಸಂಭ್ರಮದಲ್ಲಿ ಕೊಂಕಣಿ ಭಾಷೆಗೆ ಸಂಬಂಧಿಸಿದಂತೆ ವಿಚಾರಗೋಷ್ಠಿಗಳು, ಸಂವಾದ, ಸಾಂಸ್ಕೃತಿಕ ನೃತ್ಯ ವೈಭವ, ಕವಿತಾ ಟ್ರಸ್ಟ್ ಸಹಯೋಗದಲ್ಲಿ ಅಖಿಲ ಭಾರತ ಕೊಂಕಣಿ ಕವಿತಾ ಸ್ಪರ್ಧೆಗಳು ಜರುಗಿದವು. ವಿಶ್ವ ಕೊಂಕಣಿ ಸರದಾರ ಸ್ವರ್ಗೀಯ ಬಸ್ತಿ ವಾಮನ ಶೆಣೈ ಅವರ ೯೦ನೇ ಜನ್ಮ ಜಯಂತಿಯ ಸಂದರ್ಭದಲ್ಲಿ ಬಸ್ತಿಯವರ ಪುತ್ಥಳಿಗೆ ಹಾರಾರ್ಪಣೆಗೈದು ಸಂಭ್ರಮಿಸಿದರು.