ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ತಿಪ್ಪನಹಳ್ಳಿ ಮುಖಂಡರು

KannadaprabhaNewsNetwork |  
Published : Nov 12, 2025, 01:15 AM IST
ತಿಪ್ಪನಹಳ್ಳಿಯಲ್ಲಿ ರಾಜಕೀಯ ಬದಲಾವಣೆ: ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಮುಖಂಡರ ಸೇರ್ಪಡೆ | Kannada Prabha

ಸಾರಾಂಶ

ಗ್ರಾಮ ಮಟ್ಟದಲ್ಲಿ ಶಾಸಕ ಶಿವಲಿಂಗೇಗೌಡರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಂಡು ನಾವು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದೇವೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮದ ಪ್ರಮುಖರಾದ ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ, ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡರ ಸಮ್ಮುಖದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಎಂ. ಶಿವಲಿಂಗೇಗೌಡರು, ಕಾಂಗ್ರೆಸ್ಸಿನ ಅಭಿವೃದ್ಧಿ ನೀತಿಗಳ ಮೇಲೆ ಭರವಸೆ ಇಟ್ಟು, ಬೇರೆ ಪಕ್ಷಗಳಿಂದ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ನಮ್ಮ ಪಕ್ಷದತ್ತ ಬರುತ್ತಿದ್ದಾರೆ. ಯಾವುದೇ ಲಾಭ ನಷ್ಟಗಳ ನಿರೀಕ್ಷೆಗಳಿಲ್ಲದೆ ಪಕ್ಷ ಸೇರುವ ತಿಪ್ಪನಹಳ್ಳಿ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮಗ್ರ ಅಭಿವೃದ್ಧಿಯೇ ಈ ರಾಜಕೀಯ ಬದಲಾವಣೆಗೆ ಮುಖ್ಯ ಕಾರಣ ಎಂದು ಹೇಳಿದರು.

ಪ್ರದೀಪ್ ಕುಮಾರ್ ಮಾತನಾಡಿ, ಗ್ರಾಮ ಮಟ್ಟದಲ್ಲಿ ಶಾಸಕ ಶಿವಲಿಂಗೇಗೌಡರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಂಡು ನಾವು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದೇವೆ. ಬೆಳಗುಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ವೇದಾನಂದ ಮೂರ್ತಿಯವರ ಆಡಳಿತದಲ್ಲಿ ಕಂಡುಬಂದ ಪಕ್ಷಪಾತ ಮತ್ತು ಮಲತಾಯಿ ಧೋರಣೆಯನ್ನು ಖಂಡಿಸಿ ಬೇಸತ್ತು, ಯಾವುದೇ ಷರತ್ತುಗಳನ್ನು ಇರಿಸದೇ ನಾವು ಕಾಂಗ್ರೆಸ್ಸನ್ನು ಆಯ್ಕೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ತಿಪ್ಪನಹಳ್ಳಿಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಕೈಜೋಡಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪರಮೇಶ್, ಮಾಜಿ ಅಧ್ಯಕ್ಷ ರಾಮಣ್ಣ, ಗುಡುಗೌಡರ ನಂದೀಶ್, ಓಂಕಾರಮೂರ್ತಿ, ಮಲ್ಲಿದೇವರಹಳ್ಳಿ ಮಂಜುನಾಥ್ ಸೇರಿದಂತೆ ಅನೇಕ ಕಾರ್ಯಕರ್ತರು ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಬೆಳಗುಂಬ ಬಾಬು, ಜಯಣ್ಣ, ಮಲ್ಲಿಕಾರ್ಜುನ, ಪೃಥ್ವಿನಾಯಕ, ದರ್ಶನ್ ದಾಸ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?
ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು