ಸರ್ಕಾರದ ರೈತ ಪರ ಕಾರ್ಯಕ್ರಮ ಕೃಷಿಸಖಿರಿಂದ ಅರಿವು

KannadaprabhaNewsNetwork |  
Published : Jul 24, 2025, 01:45 AM IST
42 | Kannada Prabha

ಸಾರಾಂಶ

ಕೃಷಿ ಸಖಿಯರು ರೈತರ ತಾಕುಗಳಿಗೆ ಭೇಟಿ ನೀಡಬೇಕಾದಲ್ಲಿ ಮೊದಲು ಕೃಷಿ ತಾಂತ್ರಿಕತೆಗಳನ್ನು ಕೃಷಿಸಖಿಯರು ಕಲಿತಿರಬೇಕು,

ಕನ್ನಡಪ್ರಭ ವಾರ್ತೆ ಮೈಸೂರುಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ, ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕ ಸಹಯೋಗದಲ್ಲಿ ಪರಿಸರ ಕೃಷಿ ವಿಧಾನಗಳು ಕುರಿತು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿ) 6 ದಿನಗಳ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಆಯೋಜಿಸಿತ್ತು.ಮಂಡ್ಯದ ವಿ.ಸಿ. ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಬಿ.ಎಸ್. ಬಸವರಾಜು ಉದ್ಘಾಟಿಸಿ ಮಾತನಾಡಿ, ಕೃಷಿಸಖಿ ತರಬೇತಿ ಕಾರ್ಯಕ್ರಮವನ್ನು ಮಹಿಳೆಯರಿಗೆ ಆಯೋಜಿಸಿರುವುದು ಸರ್ಕಾರದ ರೈತ ಪರ ಕಾರ್ಯಕ್ರಮಗಳು ಸುಲಭವಾಗಿ ರೈತರಿಗೆ ತಲುಪುವಂತಾಗಲು ಸಹಕಾರಿಯಾಗಿ ಎಂದರು. ಕೃಷಿ ಸಖಿಯರು ರೈತರ ತಾಕುಗಳಿಗೆ ಭೇಟಿ ನೀಡಬೇಕಾದಲ್ಲಿ ಮೊದಲು ಕೃಷಿ ತಾಂತ್ರಿಕತೆಗಳನ್ನು ಕೃಷಿಸಖಿಯರು ಕಲಿತಿರಬೇಕು, ಈ ತಾಂತ್ರಿಕತೆಗಳು ಇಂತಹ ತರಬೇತಿ ಕಾರ್ಯಕ್ರಮಗಳಿಂದ ಸಿಗುತ್ತದೆ. ಆದ್ದರಿಂದ, ರೈತ ಮಹಿಳೆಯರು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಪರಿಸರ ಹಾಗೂ ಆರೋಗ್ಯ ಉತ್ಪನ್ನಗಳನ್ನು ಉತ್ಪಾದಿಸಿ, ಆರೋಗ್ಯ ಮಟ್ಟವನ್ನು ಸುಧಾರಿಸಬೇಕು. ಕಾರ್ಯಕ್ರಮದ ಪ್ರಮುಖ ಹಂತವಾಗಿ ಕೃಷಿಸಖಿಯರಿಗಾಗಿ ಪರಿಸರ ಕೃಷಿ ವಿಧಾನಗಳ ಬಗ್ಗೆ ಈ 6 ದಿನಗಳು ಆಯೋಜಿಸಿರುವ ಮೂರನೇ ಮಾಡ್ಯುಲ್‌ ನ ತರಬೇತಿ ಬಹಳ ಉಪಯುಕ್ತವಾಗಿದೆ. ತರಬೇತಿಯನ್ನು ಪಡೆದು, ಕೃಷಿಸಖಿಯರು ಪ್ರಮುಖ ಇಲಾಖೆಗಳು ಹಾಗೂ ರೈತರಿಗೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ, ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಶ್ರಮಿಸಬೇಕೆಂದು ಅವರು ಮನವಿ ಮಾಡಿದರು. ಅಧ್ಯಕ್ಷತೆ ವಹಿಸಿದ್ದ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಂದಾಳು, ಪ್ರಾಧ್ಯಾಪಕರು (ಬೇಸಾಯಶಾಸ್ತ್ರ) ಡಾ.ಸಿ. ರಾಮಚಂದ್ರ ಮಾತನಾಡಿ, ನಮ್ಮ ಕೇಂದ್ರದಲ್ಲಿ ಮೊದಲನೇ ಮತ್ತು ಎರಡನೇ ಮಾಡ್ಯುಲ್ ತರಬೇತಿ ಪಡೆದ ಕೃಷಿಸಖಿಯರು ಈಗಾಗಲೇ ರೈತರೊಡನೆ ಉತ್ತಮ ಒಟನಾಟವನ್ನಿಟ್ಟುಕೊಂಟು ಕೃಷಿ ಇಲಾಖೆಯೊಡನೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಅಭಿನಂದಿಸಿದರು.ತರಬೇತಿಯ ಮೂಲ ಉದ್ದೇಶ ಜೀವನೋಪಾಯ ವೃದ್ಧಿ ಮಾಡುವ ಜೊತೆಗೆ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ಹೊಸ ಯೋಜನೆಯಾಗಿದೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಪಡೆದ ನೂತನ ತಾಂತ್ರಿಕೆಗಳನ್ನು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆಯುವ ಗ್ರಾಮಸಭೆಗಳಲ್ಲಿ ಭಾಗವಹಿಸಿ, ರೈತರಿಗೆ ಮಾಹಿತಿ ನೀಡುವಂತೆ ತಿಳಿಸಿದರು.ಕೇವಲ ಕೃಷಿ ಮಾತ್ರವಲ್ಲದೆ ಮೌಲ್ಯವರ್ಧನೆ, ಕೃಷಿ ಮಾರುಕಟ್ಟೆ, ಕೃಷಿ ತಂತ್ರಜ್ಞಾನಗಳ ಬಗ್ಗೆ ತರಬೇತಿ ಪಡೆದು ಉದ್ಯೋಗವಕಾಶ ಮತ್ತು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ವಿಜ್ಞಾನಿ ಡಾ.ಜೆ.ಜಿ.ರಾಜಣ್ಣ ಮಾತನಾಡಿ, ಮಣ್ಣು ಪರೀಕ್ಷೆಯ ವಿಧಾನಗಳು ಮತ್ತು ಮಣ್ಣು ಆರೋಗ್ಯ ಚೀಟಿಯ ಬಗ್ಗೆ ಕೃಷಿಸಖಿಯರಿಗೆ ಮಾಹಿತಿ ನೀಡಿದರಗ್ಯಿದು ರೈತರಿಗೆ ಎಷ್ಟು ಉಪಯುಕ್ತ ಎಂಬುದನ್ನು ರೈತರಿಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.ವಲಯ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ. ವೆಂಕಟಪ್ಪ ಮತ್ತು ಡಾ. ಸಿ.ಎಂ. ಸುನಿಲ್ ಇದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ್ ಸ್ವಾಗತಿಸಿದರು.

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ