- ವಿಜಯೇಂದ್ರ, ಅಶೋಕ, ನಾರಾಯಣ ಸ್ವಾಮಿ ನೇತೃತ್ವದ ಹೋರಾಟ - - -
ಕನ್ನಡಪ್ರಭ ವಾರ್ತೆ ದಾವಣಗೆರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಮೂರನೇ ಹಂತದ ಜನಾಕ್ರೋಶ ಯಾತ್ರೆ ಏ.21ರಂದು ದಾವಣಗೆರೆ ನಗರಕ್ಕೆ ಆಗಮಿಸುತ್ತಿದೆ. ಈ ಹಿನ್ನೆಲೆ ನಗರದ ಪ್ರಮುಖ ರಸ್ತೆ, ವೃತ್ತ, ಹೋರಾಟದ ಮಾರ್ಗದಲ್ಲಿ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.ನಗರದ ಅಪೂರ್ವ ಹೋಟೆಲ್ ಬಳಿ ಬೆಳಗ್ಗೆ 10.30ಕ್ಕೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಬಿಜೆಪಿ ಜನಾಕ್ರೋಶ ಯಾತ್ರೆ ಸ್ವಾಗತಿಸಲಿದ್ದಾರೆ. ಅಲ್ಲಿಂದ ಯಾತ್ರೆಯು ಶ್ರೀ ಜಯದೇವ ವೃತ್ತದ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ರಸ್ತೆಗೆ ತಲುಪಲಿದೆ. ಸಭಾ ಸ್ಥಳದಲ್ಲಿನ ಸಿದ್ಧತೆಗಳನ್ನು ಭಾನುವಾರ ಸಂಜೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಇತರರು ವೀಕ್ಷಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ, ವಿಪ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ವಿಪ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ ಇತರರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಶ್ರೀ ಜಯದೇವ ವೃತ್ತದ ಬಳಿ ಬಹಿರಂಗ ಸಭೆ ನಂತರ ಅಲ್ಲಿಂದ ಅಶೋಕ ರಸ್ತೆ, ಮಹಾತ್ಮ ಗಾಂಧಿ ವೃತ್ತ, ಹಳೆ ಪಿಬಿ ರಸ್ತೆ ಮಾರ್ಗವಾಗಿ ಉಪವಿಭಾಗಾಧಿಕಾರಿ ಕಚೇರಿಗೆ ಪಕ್ಷದ ನಾಯಕರ ನೇತೃತ್ವದಲ್ಲಿ ಪಾದಯಾತ್ರೆ ತೆರಳಿ ಮನವಿ ಅರ್ಪಿಸಲಿದೆ.
ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಮುಖಂಡರಾದ ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ, ಐರಣಿ ಅಣ್ಣೇಶ, ಧನಂಜಯ ಕಡ್ಲೇಬಾಳ್, ಅನಿಲಕುಮಾರ ನಾಯ್ಕ, ರಘು ಅಂಬರಕರ್, ಬಿ.ಎಂ.ಸತೀಶ ಕೊಳೇನಹಳ್ಳಿ, ಎಲ್.ಎನ್.ಕಲ್ಲೇಶ, ಕೊಟ್ರೇಶ ಗೌಡ, ಎಚ್.ಪಿ.ವಿಶ್ವಾಸ, ಪ್ರವೀಣ ಜಾಧವ್, ರಾಜು ವೀರಣ್ಣ, ಕೆಟಿಜೆ ನಗರ ಬಿ.ಆನಂದ ಇತರರು ಇದ್ದರು.- - -
-20ಕೆಡಿವಿಜಿ11, 12: