ರಸ್ತೆಗೆ ಹಂಪ್ಸ್ ನಿರ್ಮಿಸಿ: ಈ ಸ್ಥಳದಲ್ಲಿ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಲೇ ಇರುತ್ತವೆ. ಇದು ಬೈಪಾಸ್ ರಸ್ತೆ ಹಾಗೂ ಯಳಂದೂರು ಪಟ್ಟಣ, ಹೊನ್ನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಹಾಗಾಗಿ ಇಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ಇಲ್ಲಿಗೆ ರಸ್ತೆ ಉಬ್ಬು ನಿರ್ಮಿಸಬೇಕು ಎಂದು ಸಾರ್ವಜನಿಕರ ಬೇಡಿಕೆಯಾಗಿದ್ದು, ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸುತ್ತಿದ್ದು ಕೂಡಲೇ ರಸ್ತೆಗೆ ಹಂಪ್ ನಿರ್ಮಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಯಳಂದೂರು
ಪಟ್ಟಣದ ರಾಷ್ಟ್ರೀಯ ಹೆದ್ದಾರಿ- 948ರ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಗೂಡ್ಸ್ ಆಟೋ ಪಲ್ಟಿ ಹೊಡೆದ ಪರಿಣಾಮ 13 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮಸ್ಥರು ಚಿಕ್ಕಲ್ಲೂರು ದೇಗುಲಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬೈಪಾಸ್ ರಸ್ತೆಯಲ್ಲಿ ಇವರು ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದ ವೇಳೆ ಹೊನ್ನೂರು ಗ್ರಾಮದಿಂದ ಅಡ್ಡಲಾಗಿ ಬಂದ ವಾಹನ ಕಂಡು ಆಟೋ ನಿಯಂತ್ರಿಸಲು ಮುಂದಾದ ಚಾಲಕನ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದೆ. ಈ ವೇಳೆ ಆಟೋದಲ್ಲಿದ್ದ ಜ್ಯೋತಿ, ತುಳಸಮ್ಮ, ಮಣಿ, ಲೋಕೇಶ್, ಪಾರ್ವತಮ್ಮ, ತಾಯಮ್ಮ, ರತ್ನಮ್ಮ, ಶೈಲಾ, ಕುಮಾರ್, ನಂಜುಂಡೇಗೌಡ, ಮಾದೇಗೌಡ , ರತ್ನಮ್ಮ ಗಾಯಗೊಂಡಿದ್ದು, ಇವರಿಗೆ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ವಹಿಸಲಾಗಿದೆ.
ರಸ್ತೆಗೆ ಹಂಪ್ಸ್ ನಿರ್ಮಿಸಿ: ಈ ಸ್ಥಳದಲ್ಲಿ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಲೇ ಇರುತ್ತವೆ. ಇದು ಬೈಪಾಸ್ ರಸ್ತೆ ಹಾಗೂ ಯಳಂದೂರು ಪಟ್ಟಣ, ಹೊನ್ನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಹಾಗಾಗಿ ಇಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ಇಲ್ಲಿಗೆ ರಸ್ತೆ ಉಬ್ಬು ನಿರ್ಮಿಸಬೇಕು ಎಂದು ಸಾರ್ವಜನಿಕರ ಬೇಡಿಕೆಯಾಗಿದ್ದು, ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸುತ್ತಿದ್ದು ಕೂಡಲೇ ರಸ್ತೆಗೆ ಹಂಪ್ ನಿರ್ಮಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.