ಕನ್ನಡಪ್ರಭ ವಾರ್ತೆ ಹಾವೇರಿ
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40 ಪರ್ಸೆಂಟ್ ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರ್ಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ತಾಕೀತು ಮಾಡಿದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ ರೀತಿ ಮಾತನಾಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇಳಿಸಿದ್ದಾರೆ. ಹಿಂದಿನ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.