ಮಂತ್ರಾಲಯ ರಾಯರಿಗೆ ಇದೇ ಮೊದಲ ಬಾರಿಗೆ ತೆಪ್ಪೋತ್ಸವ

KannadaprabhaNewsNetwork |  
Published : Aug 10, 2025, 01:30 AM IST
ಮಂತ್ರಾಲಯದಲ್ಲಿ ರಾಯರ ತೆಪೋತ್ಸವ | Kannada Prabha

ಸಾರಾಂಶ

ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಹಮ್ಮಿಕೊಂಡಿರುವ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನೆಯ ಸಪ್ತರಾತ್ರೋತ್ಸವದ ಎರಡನೇ ದಿನ ತಿರುಮಲ-ತಿರುಪತಿ ದೇವಸ್ಥಾನ (ಟಿಟಿಡಿ)ದಿಂದ ತಂದಿದ್ದ ಶೇಷವಸ್ತ್ರ ಆಗಮನ, ಇದೇ ಮೊದಲ ಬಾರಿಗೆ ಹೊಸದಾಗಿ ನಿರ್ಮಿಸಿರುವ ಲೋಕಾರ್ಪಣೆಗೊಂಡ ಪುಷ್ಕರಣಿಯಲ್ಲಿ ಉತ್ಸವ ರಾಯರ ತೆಪೋತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ರಾಯಚೂರುಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಹಮ್ಮಿಕೊಂಡಿರುವ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನೆಯ ಸಪ್ತರಾತ್ರೋತ್ಸವದ ಎರಡನೇ ದಿನ ತಿರುಮಲ-ತಿರುಪತಿ ದೇವಸ್ಥಾನ (ಟಿಟಿಡಿ)ದಿಂದ ತಂದಿದ್ದ ಶೇಷವಸ್ತ್ರ ಆಗಮನ, ಇದೇ ಮೊದಲ ಬಾರಿಗೆ ಹೊಸದಾಗಿ ನಿರ್ಮಿಸಿರುವ ಲೋಕಾರ್ಪಣೆಗೊಂಡ ಪುಷ್ಕರಣಿಯಲ್ಲಿ ಉತ್ಸವ ರಾಯರ ತೆಪೋತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು.

ಬೆಳಗ್ಗೆ ಶ್ರೀಮಠದ ಮಧ್ವ ಕಾರಿಡಾರ್‌ ಆರಂಭದಲ್ಲಿ ಶೇಷವಸ್ತ್ರ ಸಮೇತರಾಗಿ ಆಗಮಿಸಿದ್ದ ಟಿಟಿಡಿ ಅಧಿಕಾರಿ, ಪಂಡಿತರನ್ನು ಮಠದಿಂದ ಬರಮಾಡಿಕೊಳ್ಳಲಾಯಿತು. ಪೀಠಾಧಿಪತಿ ಡಾ। ಸುಬುಧೇಂದ್ರ ತೀರ್ಥರು ಶ್ರೀನಿವಾಸ ದೇವರ ಶೇಷವಸ್ತ್ರಗಳನ್ನು ತಮ್ಮ ತಲೆಯ ಮೇಲೆ ಇರಿಸಿಕೊಂಡು ಪ್ರಕಾರದಲ್ಲಿ ಪ್ರದಕ್ಷಿಣೆ ಹಾಕಿದರು. ಶೇಷವಸ್ತ್ರವನ್ನು ಸೋಮವಾರ ನಡೆಯಲಿರುವ ಮಧ್ಯಾರಾಧನೆಯಂದು ರಾಯರ ಸಮರ್ಪಿಸಲಾಗುತ್ತದೆ. ಸಪ್ತರಾತ್ರೋತ್ಸವದ 2ನೇ ದಿನವಾದ ಶನಿವಾರ ಸಂಜೆ ಉತ್ಸವ ರಾಯರಿಗೆ ತೆಪ್ಪೋತ್ಸವ ಇದೇ ಮೊದಲ ಸಲ ನಡೆಯಿತು. ಭಕ್ತರೊಬ್ಬರು ನಿರ್ಮಿಸಿಕೊಟ್ಟ ಪುಷ್ಕರಣೆಯಲ್ಲಿ ಈ ತೆಪ್ಪೋತ್ಸವ ಅದ್ದೂರಿಯಾಗಿ ನಡೆಯಿತು. ನೂತನ ಪುಷ್ಕರಣಿ ಹಾಗೂ ಕವೀಂದ್ರ ತೀರ್ಥರು ಹಾಗೂ ವಾಗೀಶ್‌ ತೀರ್ಥರ ಹೆಸರಿನಲ್ಲಿ ನಿರ್ಮಿಸಿದ ವಸತಿ ಭವನಗಳನ್ನು ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಉದ್ಘಾಟಿಸಿದರು. ಪುಷ್ಕರಣಿಯಲ್ಲಿ ನೀರು ಸಂಗ್ರಹಗೊಂಡ ನಂತರ ಸ್ವಾಮಿಗಳು ಈಜಾಡಿ ಗಮನ ಸೆಳೆದಿದ್ದರು. ಆ ವಿಡಿಯೋ ಈಗ ವೈರಲ್‌ ಗೊಂಡಿದೆ.ತೆಪ್ಪೋತ್ಸವ:ಸುಕ್ಷೇತ್ರ ಮಂತ್ರಾಲಯದ ಮಠದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವಶ್ರೀಮಠದಲ್ಲಿ ಉತ್ಸವ ಮೆರವಣಿಗೆ ಮುಖಾಂತರ ಪುಷ್ಕರಣಿ ಬಳಿಗೆ ತೆರಳಿ ಉತ್ಸವ ರಾಯರಿಗೆ ತೆಪೋತ್ಸವ, ದೀಪೋತ್ಸವಗಳನ್ನು ನೆರವೇರಿಸಲಾಯಿತು. ನಂತರ ಶ್ರೀಮಠದ ಪ್ರಕಾರದಲ್ಲಿ ಶಾಖೋತ್ಸವ ಹಾಗೂ ಸ್ವಸ್ತಿವಾಚನ, ಮತ್ತು ರಥೋತ್ಸವವನ್ನು ಶ್ರೀಗಳು ನೆರವೇರಿಸಿಕೊಟ್ಟರು.+++ಚಿತ್ರ ಶೀರ್ಷಿಕೆಶ್ರೀರಾಘವೇಂದ್ರ ತೀರ್ಥರಿಗೆ ಹೊಸದಾಗಿ ನಿರ್ಮಿಸಿದ ಪುಷ್ಕರಣಿಯಲ್ಲಿ ತೆಪ್ಪೋತ್ಸವ ನೆರವೇರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಶಾಲೆಯಲ್ಲೆ ಸಾಹಿತ್ಯ, ಸಂಸ್ಕೃತಿ ಪರಿಚಯಿಸಿ
ಭತ್ತ ಸಸಿ ನಾಟಿಗೆ ಕಾಲುವೆಗಳಿಗೆ ಭದ್ರಾ ನೀರು ಹರಿಸಿ: ಬಿಜೆಪಿ ರೈತ ಮೋರ್ಚಾ