ಕನ್ನಡಪ್ರಭ ವಾರ್ತೆ ಕಾಗವಾಡ
ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಮದಭಾವಿ, ಹಣಮಾಪೂರ, ನಾಗನೂರ ಪಿಎ ಹಾಗೂ ಕಲ್ಲೂತ್ತಿ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ ಈ ವೇಳೆ ಸಚಿವ ಸ್ಥಾನ ಕುರಿತು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಸಕ ಲಕ್ಷ್ಮಣ ಸವದಿ ಮತ್ತು ಕಾರ್ಯಕರ್ತರ ಮಧ್ಯೆ ಉಂಟಾದ ವಾಗ್ವಾದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಮತ್ತು ಲಕ್ಷ್ಮಣ ಸವದಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಸುಮಾರು 35 ವರ್ಷಗಳ ಗೆಳೆಯರಿದ್ದೇವೆ. ನಮ್ಮಿಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯವಿದ್ದು, ಮಾಧ್ಯಮದವರೇ ಭಿನ್ನಾಭಿಪ್ರಾಯ ಸೃಷ್ಟಿ ಮಾಡುತ್ತಿದ್ದಾರೆ. 2028ರ ಚುನಾವಣೆಗೆ ಕಾಗವಾಡ ಮತಕ್ಷೇತ್ರದಿಂದ ನಾನು ಮತ್ತೆ ಅಭ್ಯರ್ಥಿಯಾಗುವ ಹಾಗೂ ಶಾಸಕನಾಗುವ ವಿಶ್ವಾಸ ಇದೆ ಎಂದರು.ಇನ್ನು, ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುವ ವಿಚಾರವಾಗಿ, ಈ ಬಗ್ಗೆ ಸದನದಲ್ಲೂ ನಾನು ಪ್ರಸ್ತಾಪಿಸಿದ್ದೇನೆ. ಶೀಘ್ರದಲ್ಲೇ ಕೃಷ್ಣಾ ನದಿಗೆ ನೀರು ಮಹಾರಾಷ್ಟ್ರದ ಕೊಯ್ನಾ ಇಲ್ಲವೇ ಕಾಳಮ್ಮವಾಡಿ ಜಲಾಶಯದಿಂದ 2 ಟಿಎಂಸಿ ನೀರು ಪೂರೈಕೆ ಸಾಧ್ಯತೆ ಇದೆ. ಅಭಿವೃದ್ಧಿ ಕಾರ್ಯಗಳು ಹಾಗೂ ನೀರಿನ ವಿಚಾರದಲ್ಲಿ ತಮ್ಮ ಬದ್ಧತೆಯನ್ನು ಮುಂದುವರಿದಿದೆ. ಕಾಗವಾಡ ಮತಕ್ಷೇತ್ರದಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಿಸಿ, ಅವುಗಳಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷ್ಣಾ ನದಿ ತೀರದ ಸಾವಿರಾರು ಎಕರೆ ಸವಳು ಮತ್ತು ಜವಳು ಭೂಮಿಯನ್ನು ಫಲವತ್ತತೆ ಮಾಡಲು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡದೇ, ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಿ, ಯೋಜನೆ ಸಿದ್ಧಪಡಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
-----------ಕೋಟ್
- ರಾಜು ಕಾಗೆ, ಕಾಗವಾಡ ಶಾಸಕ