ವರ್ಷದ ಹಿಂದೆ ಸೋತಿರಬಹುದು, ಆದರೆ ಈಗಲ್ಲ
- ತಪ್ಪು ತಿದ್ದಿಕೊಂಡಿದ್ದೇನೆ, ಜನ ಮತ್ತೆ ನನ್ನ ಆಶೀರ್ವದಿಸುತ್ತಾರೆ: ರಾಮುಲು
ಕೆ.ಎಂ.ಮಂಜುನಾಥ್ಕನ್ನಡಪ್ರಭ ವಾರ್ತೆ ಬಳ್ಳಾರಿ
- ಬಿಸಿಲು ಲೆಕ್ಕಿಸದೆ ಎರಡು ತಿಂಗಳಿನಿಂದ ಓಡಾಡುತ್ತಿರುವೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು. ದೇಶದ ಭದ್ರತೆ ವಿಚಾರದಲ್ಲಿ ಮೋದಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಹೀಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ. ಮೋದಿ ಕೈ ಬಲಪಡಿಸುತ್ತೇವೆ ಎಂದು ಜನರೇ ಹೇಳುತ್ತಿದ್ದಾರೆ.*ಬಿಎಸ್ಸಾರ್ ಪಕ್ಷದಿಂದ ಮಾಡಿದ ಸ್ಪರ್ಧೆಗೂ, ಬಿಜೆಪಿ ಅಭ್ಯರ್ಥಿಯಾಗಿ ಮಾಡುವ ಸ್ಪರ್ಧೆಗೂ ಏನು ವ್ಯತ್ಯಾಸ?
- ಪಕ್ಷದ ತೀರ್ಮಾನ. ಸ್ಪರ್ಧಿಸುವಂತೆ ಪಕ್ಷ ಸೂಚನೆ ನೀಡಿದ ಬಳಿಕ ನಾನು ಅಖಾಡಕ್ಕೆ ಇಳಿದಿರುವೆ. ಪಕ್ಷದಲ್ಲಿ 35 ವರ್ಷಗಳಿಂದ ಸೇವೆ ಮಾಡಿರುವೆ. 8 ಚುನಾವಣೆ ಎದುರಿಸಿರುವೆ, ಎರಡು ಬಾರಿ ಸೋತು, ಆರು ಚುನಾವಣೆಯಲ್ಲಿ ಗೆದ್ದಿರುವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೂ ಪಕ್ಷಕ್ಕೆ ನಾನು ಮಾಡಿದ ಸೇವೆ ರಾಜಕಾರಣದಲ್ಲಿ ಕಳೆದು ಹೋಗಬಾರದು ಎಂಬ ಕಾರಣಕ್ಕಾಗಿ ಪಕ್ಷ ನನ್ನ ಗುರುತಿಸಿ, ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.*ವಿಧಾನಸಭಾ ಚುನಾವಣೆಯ ನಿಮ್ಮ ಸೋಲಿಗೆ ಕಾಂಗ್ರೆಸ್ಸಿನ ಸುಳ್ಳು ಗ್ಯಾರಂಟಿ ಕಾರಣ ಎಂದಿದ್ದೀರಿ. ಈಗಲೂ ಕಾಂಗ್ರೆಸ್ಸಿನ ಗ್ಯಾರಂಟಿ ಕಠಿಣ ಸವಾಲು ಆಗಬಹುದಲ್ಲವೇ?
- ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತೆ. ಒಂದು ವೇಳೆ ಗೆದ್ದಿದ್ದರೆ ಉಪ ಮುಖ್ಯಮಂತ್ರಿ ಆಗುತ್ತಿದ್ದೆ. ಆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಸಂಖ್ಯೆಯಲ್ಲಿ ಗೆಲುವಾಗಲಿಲ್ಲ. 104 ಸ್ಥಾನಗಳಷ್ಟೇ ಬಂತು. ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. ಹೀಗಾಗಿ ನಾನು ಅಲ್ಲಿ ಸ್ಪರ್ಧಿಸಿದೆ. ಈ ಬಗ್ಗೆ ಕುರುಬರಿಗೆ ನನ್ನ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಬಳ್ಳಾರಿ ಕ್ಷೇತ್ರದ ಕುರುಬರು ನನ್ನ ಜೊತೆಗಿದ್ದಾರೆ.
- ಹಾಗೇನಿಲ್ಲ, ಶಾಸಕ ಹಾಗೂ ಸಚಿವನಾಗಿ ಮಾಡಿರುವ ಕೆಲಸವನ್ನು ಜಿಲ್ಲೆಯ ಜನರು ಗಮನಿಸಿದ್ದಾರೆ. ನಾನು ಮೊದಲಿನಿಂದ ಅಭಿವೃದ್ಧಿ ಬಗ್ಗೆ ಚಿಂತಿಸುವವ. ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದೇನೆ. ಈ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರವಷ್ಟೇ ಅಲ್ಲ; ಇಡೀ ದೇಶದಲ್ಲೇ ಮೋದಿ ಗುಣಗಾನ ಕೇಳಿ ಬರುತ್ತಿದೆ. ಮೋದಿ ಮತ್ತೆ ಪ್ರಧಾನಿಯಾಗಬೇಕು. ಈ ದೇಶ ಮತ್ತಷ್ಟು ಸುರಕ್ಷತೆಯಾಗಬೇಕು. ಅಭಿವೃದ್ಧಿಯಲ್ಲಿ ಮತ್ತಷ್ಟು ಮುಂಚೂಣಿಗೆ ಬರಬೇಕು ಎಂದು ದೇಶದ ಜನರು ಆಶಿಸುತ್ತಿದ್ದಾರೆ.*ರಾಮುಲು ಈ ಜಿಲ್ಲೆಗೆ ನೀಡಿದ ಕೊಡುಗೆ ಏನು? ಬಿಜೆಪಿ ನೀಡಿದ ಕೊಡುಗೆ ಏನು ಎಂದು ಕಾಂಗ್ರೆಸ್ ಪ್ರಶ್ನಿಸುತ್ತಿದೆ?
- ಜನಾರ್ದನ ರೆಡ್ಡಿ ಆಗಮನದಿಂದ ಖಂಡಿತ ನನಗೆ ಶಕ್ತಿ ಬಂದಿದೆ. ರೆಡ್ಡಿ ನಾನಾ ಕಾರಣಗಳಿಂದ ಬಳ್ಳಾರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ನನ್ನ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಜನಾರ್ದನ ರೆಡ್ಡಿ ಈ ಹಿಂದಿನಿಂದಲೂ ನನ್ನ ಶ್ರೇಯಸ್ಸು ಬಯಸಿದವರು. ಬಳ್ಳಾರಿಗೆ ಬರಲು ಸಾಧ್ಯವಾಗದ ಕಾರಣ ರೆಡ್ಡಿ ಪತ್ನಿ ನನ್ನ ಪರ ಪ್ರಚಾರ ಮಾಡುತ್ತಿದ್ದಾರೆ.*ಹಿಂದಿನ ಬಿಜೆಪಿ ಸರ್ಕಾರದಲ್ಲಿ ತಾವು ಉಪಮುಖ್ಯಮಂತ್ರಿ ಆಗುತ್ತೀರಿ ಎನ್ನುವ ಚರ್ಚೆಯಿತ್ತು. ಆದರೆ, ಆಗಲಿಲ್ಲ. ತಾವು ಸೋಲುಂಡಾಗ ಬಿಜೆಪಿ ಪರಿಷತ್ತಿಗೂ ತಮ್ಮನ್ನು ನೇಮಕ ಮಾಡಲಿಲ್ಲವಲ್ಲ?
- ನನ್ನ ವರ್ಚಸ್ಸು ಕಡಿಮೆಯಾಗಿದೆಯೋ ಅಥವಾ ಹೆಚ್ಚಾಗಿದೆಯೋ ನನಗೆ ಗೊತ್ತಿಲ್ಲ. ಆದರೆ, ಕಳೆದ ಒಂದೂವರೆ ವರ್ಷದಿಂದ ನೋವು ಪಟ್ಟಿದ್ದೇನೆ. ಚುನಾವಣೆಯಲ್ಲಿ ಸೋತಿದ್ದೇಕೆ, ನಾನು ಮಾಡಿದ ತಪ್ಪೇನು ಎಂದು ಅವಲೋಕನ ಮಾಡಿಕೊಂಡಿದ್ದೇನೆ. ಪಶ್ಚಾತ್ತಾಪವನ್ನೂ ಪಟ್ಟಿದ್ದೇನೆ. ಎಲ್ಲಿ ತಪ್ಪು ಮಾಡಿದ್ದೇನೋ ಅಲ್ಲಿ ಸರಿಮಾಡಿಕೊಳ್ಳುವ ಕೆಲಸವನ್ನೂ ಮಾಡಿದ್ದೇನೆ. ನಮಗೆ ಗೊತ್ತಿಲ್ಲದೆ ಅನೇಕ ಬಾರಿ ನಮ್ಮಿಂದ ತಪ್ಪಾಗಿರಬಹುದು. ಅದನ್ನು ತಿದ್ದಿಕೊಂಡರೆ ಮಾತ್ರ ಜನ ನಮ್ಮನ್ನು ಗುರುತಿಸುತ್ತಾರೆ. ಮತ್ತೆ ಮತ್ತೆ ಆಶೀರ್ವದಿಸುತ್ತಾರೆ.*ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಬಿಜೆಪಿ-ಕಾಂಗ್ರೆಸ್ ನಡುವೆ ಯುದ್ಧವೇ ನಡೆದಿದೆ. ವಾಸ್ತವದಲ್ಲಿ ಬಳ್ಳಾರಿಗೆ ಏನೇನಾಗಬೇಕಿದೆ? ತಾವೇನು ಮಾಡಬಲ್ಲಿರಿ?
- ಬಳ್ಳಾರಿ ಅಭಿವೃದ್ಧಿ ನೆಲೆಯಲ್ಲಿ ಸಾಕಷ್ಟು ಕನಸು ಹೊತ್ತಿದ್ದೇನೆ. ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಬೇಕು. ಆ ಮೂಲಕ ರಸ್ತೆ ಸಂಪರ್ಕ ಜಾಲ ವಿಸ್ತರಿಸಬೇಕು. ಜಿಲ್ಲೆಗೆ ವಂದೇ ಭಾರತ್ ರೈಲು ತರಬೇಕು. ಬುಲೆಟ್ ಟ್ರೈನ್ ತರಬೇಕು. ಈ ಭಾಗದಲ್ಲಿ ರೈಲ್ವೆ ಯೋಜನೆಗಳು ಮತ್ತಷ್ಟು ಹೆಚ್ಚಾಗಬೇಕು. ಬಳ್ಳಾರಿಯ ಜೀನ್ಸ್ ಗೆ ಉತ್ತೇಜನ ನೀಡಬೇಕು. ಅಂತರಾಷ್ಟ್ರೀಯ ಮಟ್ಟದಲ್ಲೂ ಬಳ್ಳಾರಿ ಜೀನ್ಸ್ ಗೆ ಮಾರುಕಟ್ಟೆ ಸೃಷ್ಟಿಸಬೇಕು. ಒಣ ಮೆಣಸಿನಕಾಯಿ ರಫ್ತಿಗೆ ಬೇಕಾದ ಪೂರಕ ಯೋಜನೆ ಜೊತೆಗೆ ಕೇಂದ್ರದ ಮಹತ್ವದ ಎಲ್ಲ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳಬೇಕು ಎಂದುಕೊಂಡಿರುವೆ.