ಸಿರಿಗೆರೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡಬೇಕೆಂದು ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಮತದಾರರಲ್ಲಿ ಮನವಿ ಮಾಡಿದರು.
ಭರಮಸಾಗರ ಸಮೀಪದ ಸಿ.ಟಿ ಮಹಾಂತೇಶ್ ಫಾರ್ಮ್ ಹೌಸ್ ಆವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಚಂದ್ರಪ್ಪ, ಪಕ್ಷ ವಿಧಾನಸಭಾ ಚುನಾವಣೆ ವೇಳೆಯಲ್ಲಿ ನೀಡಿದ್ದ ಭರವಸೆಗಳೆಲ್ಲವೂ ಜಾರಿಗೆ ಬಂದಿವೆ. ಮಹಿಳೆಯರಿಗೆ ಆರ್ಥಿಕ ಸ್ಥಿರತೆ ಲಭ್ಯವಾಗಿದೆ. ಕಾರ್ಯಕರ್ತರು ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಲ್ಲಿ ಜಾಗೃತಿ ಉಂಟು ಮಾಡಬೇಕೆಂದು ಕೋರಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರೆಲ್ಲರೂ ಪಕ್ಷದ ನನ್ನನ್ನು ಗೆಲ್ಲಿಸಲು ಸಹಕರಿಸುತ್ತಿದ್ದಾರೆ. ಕಾರ್ಯಕರ್ತರು ಸಹ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ ಕೆಲಸ ಮಾಡಬೇಕೆಂದಅರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಕ್ಷೇತ್ರದ ತುಂಬೆಲ್ಲಾ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಕುರಿತು ಜನ ಮಾತನಾಡುತ್ತಿದ್ದಾರೆ. ಎಲ್ಲರಿಗೂ ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳು ನೆರವಾಗಿವೆ. ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೆ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇವೆಲ್ಲವುಗಳನ್ನು ಕಾರ್ಯಕರ್ತರು ಮತದಾರರ ಮನಕ್ಕೆ ತಾಕುವಂತೆ ಪರಿಚಯ ಮಾಡಬೇಕು ಎಂದರು.
ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿಎಸ್.ಮಂಜುನಾಥ್, ಚಿತ್ರದುರ್ಗ ಡಿಸಿಸಿ ಅಧ್ಯಕ್ಷರಾದ ಎಂ.ಕೆ.ತಾಜ್‌ಪೀರ್, ಕೆಪಿಸಿಸಿ ಸದಸ್ಯರಾದ ಎಸ್‌ಎಂಎಲ್ ತಿಪ್ಪೇಸ್ವಾಮಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಆರ್.ಕೃಷ್ಣಮೂರ್ತಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ದುರ್ಗೇಶ್ ಪೂಜಾರ್ ಮಾಜಿ ಜಿಪಂ ಅಧ್ಯಕ್ಷ ಪಿ.ಆರ್.ಶಿವಕುಮಾರ್ ಶಿವಪುರ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಅಳಗವಾಡಿ, ಮಾಜಿ ಜಿಪಂ ಸದಸ್ಯರಾದ ತಿಪ್ಪೇಸ್ವಾಮಿ, ನರಸಿಂಹಮೂರ್ತಿ, ಕಾಂಗ್ರೆಸ್ ಮುಖಂಡರಾದ ತಿಪ್ಪೇಸ್ವಾಮಿ, ನಾಗೇಂದ್ರಪ್ಪ, ಬಿಟಿ.ಜಗದೀಶ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.