ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ ಎಂದರು.
ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅ.3 ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟಿಸಲಾಗುವುದು ಎಂದು ಅವರು ಹೇಳಿದರು.ಈ ಬಾರಿ ದಸರಾ ಆಚರಣೆಗೆ 40 ಕೋಟಿವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಹೀಗಾಗಿ, ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.
ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳ ಕುರಿತ ಸ್ತಬ್ಧಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆಯ ಮೇರಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಸೆಸ್ಕ್ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಕೆ. ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗ ಶೆಟ್ಟಿ, ಟಿ.ಎಸ್. ಶ್ರೀವತ್ಸ, ಡಿ. ರವಿಶಂಕರ್, ಎಚ್.ಎಂ. ಗಣೇಶ್ ಪ್ರಸಾದ್, ಎ.ಆರ್. ಕೃಷ್ಣಮೂರ್ತಿ, ಎಚ್. ವಿಶ್ವನಾಥ್, ಡಾ.ಡಿ. ತಿಮ್ಮಯ್ಯ, ಕೆ. ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಎಸ್ಪಿ ಎನ್. ವಿಷ್ಣುವರ್ಧನ್ ಮೊದಲಾದವರು ಇದ್ದರು.ಅರ್ಜುನ ಆನೆ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿ ನೀಡಿ
ದಸರಾ ಆಚರಣೆಗೆ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಗಜ ಪಯಣವನ್ನು ಆ.21 ರಂದು ನಿಗದಿ ಮಾಡಲಾಗಿದೆ. ಕರ್ನಾಟಕ ಸಂಭ್ರಮ 50 ಅನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು.