ಈ ಬಾರಿ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ: ಚೇತನ ಯಾದವ್

KannadaprabhaNewsNetwork |  
Published : Jan 20, 2026, 02:00 AM IST
19ಕೆಎಂಎನ್ ಡಿ17 | Kannada Prabha

ಸಾರಾಂಶ

ಜ.26ರ ಬೆಳಗ್ಗೆ 8ಗಂಟೆಗೆ ಪಟ್ಟಣದ ಪುರಸಭೆ ಕಚೇರಿಯಲ್ಲಿ ತ್ರಿವರ್ಣ ಧ್ವಜಾರೋಹಣದ ನಂತರ, ಶಾಲಾ ಮಕ್ಕಳು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿ ಸಿಬ್ಬಂದಿ ನೇತೃತ್ವದಲ್ಲಿ ಬತೇರಿಯಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಣ ನೆರವೇರಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಈ ಬಾರಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಂಘ-ಸಂಸ್ಥೆಗಳು, ನಾಗರಿಕರು ಸೇರಿ ಎಲ್ಲರೂ ತಾಲೂಕು ಆಡಳಿತದೊಂದಿಗೆ ಸಹಕರಿಸಬೇಕು ಎಂದು ತಹಸೀಲ್ದಾರ್ ಚೇತನ ಯಾದವ್ ತಿಳಿಸಿದರು.

ಪಟ್ಟಣ ಪುರಸಭೆ ಸಭಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ತಾಲೂಕು ಆಡಳಿತದಿಂದ ಗಣರಾಜ್ಯೋತ್ಸವವನ್ನು ಬೇಕಾಬಿಟ್ಟಿಯಾಗಿ ಆಚರಿಸಲಾಗುತ್ತಿತ್ತು. ಈ ಬಗ್ಗೆ ಸಂಘಟನೆಗಳಿಗೂ ಬೇಸರವಾಗಿದೆ. ಮುಂದಿನ ದಿನಗಳಲ್ಲಿ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದರು.

ತಹಸೀಲ್ದಾರ್ ಚೇತನಾ ಯಾದವ್ ಮಾತನಾಡಿ, ಗಣರಾಜ್ಯೋತ್ಸವವನ್ನು ಎಂದಿನಂತೆ ಪೂರ್ವ ತಯಾರಿ ಮೂಲಕ ಆಚರಿಸಾಲಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು ಹಾಗೂ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆಗೆ ಚರ್ಚೆ ನಡೆಸಲಾಗಿದೆ ಎಂದರು.

ಜ.26ರ ಬೆಳಗ್ಗೆ 8ಗಂಟೆಗೆ ಪಟ್ಟಣದ ಪುರಸಭೆ ಕಚೇರಿಯಲ್ಲಿ ತ್ರಿವರ್ಣ ಧ್ವಜಾರೋಹಣದ ನಂತರ, ಶಾಲಾ ಮಕ್ಕಳು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿ ಸಿಬ್ಬಂದಿ ನೇತೃತ್ವದಲ್ಲಿ ಬತೇರಿಯಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಣ ನೆರವೇರಿಸಲಾಗುತ್ತದೆ ಎಂದರು.

ಪೂರ್ವಭಾವಿ ಸಭೆಯಲ್ಲಿ ತಾಪಂ ಇಒ ವೇಣು, ಮುಖ್ಯಾಧಿಕಾರಿ ಎಂ.ರಾಜಣ್ಣ ಬಿಇಒ ನಂದೀಶ್, ಸಿಪಿಐ ಬಿ.ಜಿ. ಕುಮಾರ್, ಕಸಾಪ ಅಧ್ಯಕ್ಷ ಸಿದ್ದಲಿಂಗು, ಕರವೇ ಸ್ವಾಮೀಗೌಡ, ರೈತ ಮುಖಂಡ ಕಿರಂಗೂರು ಪಾಪು, ಕಸಾಪ ಮಾಜಿ ಅಧ್ಯಕ್ಷ ಪುರುಷೋತ್ತಮ ಚಿಕ್ಕಪಾಳ್ಯ, ಅಲ್ಲಾಪಟ್ಟಣ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು. ಇಂದಿನಿಂದ ಬನ್ನಂತಮ್ಮ ದೇವಿಯ ಹಬ್ಬದ ಸಂಭ್ರಮ

ಪಾಂಡವಪುರ: ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಜ.20 ಮತ್ತು 21ರಂದು ಎರಡು ದಿನಗಳ ಕಾಲ ಗ್ರಾಮದೇವತೆ ಬನ್ನಂತಮ್ಮ ದೇವಿ ಹಬ್ಬವು ವಿಜೃಂಭಣೆಯಿಂದ ನಡೆಯಲಿದೆ. ಕಳೆದ 17 ವರ್ಷಗಳ ಹಿಂದೆ ನಡೆದಿದ್ದ ಬನ್ನಂತಮ್ಮ ದೇವಿ ಊರ ಹಬ್ಬ ಈಗ ಆಚರಿಸುತ್ತಿದ್ದು, ಗ್ರಾಮದಲ್ಲಿ ಸಂಭ್ರಮ ಹೆಚ್ಚಾಗಿದೆ. ಹಬ್ಬದ ಅಂಗವಾಗಿ ಗ್ರಾಮದ ಪ್ರತಿಬೀದಿಯಲ್ಲೂ ತಳಿರುತೋರಣ, ವಿದ್ಯುತ್ ದೀಪಗಳಿಂದ ಸಿಂಗಾರಗೊಳ್ಳುತ್ತಿದೆ.

ಜ.20 ರಂದು ಸಂಜೆ ದೇವಿಗೆ ವಿಶೇಷ ಪೂಜೆಸಲ್ಲಿಸಿ ಹಣ್ಣಿನ ಆರತಿ ಪೂಜೆ, ಜ.21ರ ಮಂಜಾನೆ ತಬ್ಬಿಂಟಿನ ಆರತಿಯೊಂದಿಗೆ ಮನೆಗೊಂದು ಮರಿ ಹಿಡಿದುಕೊಂಡು ಹೋಗಿ ಗ್ರಾಮ ದೇವತೆ ಬನ್ನಂತಮ್ಮ ದೇವಿಗೆ ಬಲಿಕೊಟ್ಟು ಬಳಿಕ ದೇವಿಯ ಭಕ್ತರು ಅವರ ಅವರ ಮನೆಯ ಬಳಿ ನೆಂಟಸ್ಥರು, ಕುಟುಂಬಸ್ಥರಿಗೆ ಅನ್ನಸಂತರ್ಪಣೆ ಮಾಡುವರು.

17 ವರ್ಷದ ಬಳಿಕ ವಿಜೃಂಭಣೆಯಿಂದ ನಡೆಯುತ್ತಿರುವ ಬನ್ನಂತಮ್ಮ ದೇವಿ ಹಬ್ಬದ ಸಂಭ್ರಮಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಸಾರ್ವಜನಿಕರು ಆಗಮಿಸುವುದರಿಂದ ಪೊಲೀಸರು ಬಿಗಿ ಭದ್ರತೆ ಹೆಚ್ಚಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ
ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?