ಚನ್ನಪಟ್ಟಣ: ಕ್ರಿಯಾಶೀಲ ಸಂಸದರೆನಿಸಿರುವ ಸಂಸದ ಡಿ.ಕೆ.ಸುರೇಶ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ಸಾಧಿಸಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿರುವ ಜನ ಈ ಬಾರಿಯೂ ಅವರನ್ನು ಬಹುಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿ ಚುನಾವಣೆಯಲ್ಲಿ ಸಹ ಜನ ಸುರೇಶ್ ಅವರನ್ನು ಬೆಂಬಲಿಸಲಿದ್ದಾರೆ. ಸುರೇಶ್ ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ತಾಲೂಕಿನಿಂದ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ರಾಮನಗರಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಮುಖಂಡ ಎಂ.ಸಿ.ಕರಿಯಪ್ಪ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪ್ರಮೋದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಮುಖಂಡರಾದ ಪಿ.ಡಿ.ರಾಜು, ಕೋಕಿಲರಾಣಿ ಮತ್ತಿತರರು ಹಾಜರಿದ್ದರು.ಪೋಟೊ೨೮ಸಿಪಿಟಿ೩:ತಾಲೂಕಿನ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರು.