2024ರಲ್ಲಿ ಜಗತ್ತಿನ ಪ್ರಭಾವಿ ಸಂತ, ಪ್ರಧಾನಿಗಳಿಬ್ಬರ ಸಾವು- ಕೋಡಿಮಠ ಶ್ರೀ ಭವಿಷ್ಯ

KannadaprabhaNewsNetwork |  
Published : Jan 27, 2024, 01:17 AM IST
ಫೋಟೋ ಇದೆ. | Kannada Prabha

ಸಾರಾಂಶ

ಈ ವರ್ಷ ಜಗತ್ತಿನ ಜನರಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಪ್ರಧಾನಿಗಳಿಬ್ಬರು ಸಾವಿಗೀಡಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಗದಗ: 2024ರಲ್ಲಿ ಜಗತ್ತಿನ ಜನರಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಪ್ರಧಾನಿಗಳಿಬ್ಬರು ಸಾವಿಗೀಡಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣುಬಾಂಬ್ ಸ್ಫೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಭಾರತೀಯರು ದೇವರು, ಧರ್ಮ, ಸತ್ಯ, ನಂಬಿಕೆ ವಿಚಾರದಲ್ಲಿ ಪ್ರಬುದ್ಧರಾಗಿದ್ದಾರೆ. ದೇಶದ ಹಲವಾರು ಕಡೆಗಳಲ್ಲಿ ದೈವಾಂಶ ಸಂಭೂತರ ಹೆಸರಿನಲ್ಲಿ ದೇವಸ್ಥಾನ, ಗುಡಿ, ಗೋಪುರಗಳನ್ನು ನಿರ್ಮಿಸಿ ಸ್ಮರಣೆ ಮಾಡುವುದು ಸಾಮಾನ್ಯವಾಗಿದೆ. ಆ ದೆಸೆಯಲ್ಲಿ ಶ್ರೀರಾಮನ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಧಾರ್ಮಿಕ ಪ್ರತೀಕವಾಗಿದೆ ಎಂದರು. ಭಾರತೀಯ ಪ್ರಜೆಗಳಲ್ಲಿ ಆಧ್ಯಾತ್ಮಿಕ ಚಿಂತನೆ ಉಚ್ಛವಾಗಿರುವುದು ಒಳ್ಳೆಯ ಬೆಳವಣಿಗೆ. ಶ್ರೀರಾಮನ ಜನ್ಮಸ್ಥಳದಲ್ಲಿ ಶ್ರೀರಾಮನ ಬೃಹತ್ ದೇಗುಲ ನಿರ್ಮಾಣಗೊಂಡಿರುವುದು ಧಾರ್ಮಿಕವಾಗಿ ಒಳ್ಳೆಯ ಸೂಚನೆ ಸಿಕ್ಕಂತಾಗಿದೆ. ರಾಜಕೀಯದಲ್ಲಿ ಧಾರ್ಮಿಕತೆಯನ್ನು ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.ದೇಶ ಹಾಗೂ ರಾಜ್ಯ ರಾಜಕೀಯ ಕುರಿತು ಮಾತನಾಡಿದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ನಂತರ ಹಾಗೂ ಯುಗಾದಿ ನಂತರ ಭವಿಷ್ಯ ಹೇಳಲಾಗುತ್ತದೆ. ಸಂಕ್ರಾಂತಿ ನಂತರ ವ್ಯಾಪಾರ, ವಾಣಿಜ್ಯ, ಯುಗಾದಿ ನಂತರ ದೇಶದ ಸಮಗ್ರ ಮಳೆ, ಬೆಳೆ, ಜನರು, ರಾಜರು ಏನಾಗುತ್ತದೆ ಎಂಬುದು ಹೇಳಲಾಗುತ್ತದೆ. ಈಗ ರಾಜಕೀಯ ಕುರಿತು ಹೇಳುವುದು ಸಕಾಲವಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ