ತಿತಿಮತಿ ಸರ್ಕಾರಿ ಕಾಲೇಜ್‌ ವಿದ್ಯಾರ್ಥಿ ಸಂಘ ಉದ್ಘಾಟನೆ

KannadaprabhaNewsNetwork |  
Published : Jul 14, 2024, 01:44 AM ISTUpdated : Jul 14, 2024, 09:46 AM IST
ಚಿತ್ರ :  13ಎಂಡಿಕೆ8 : ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ. ರಾಜೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಶುಭ ಕೋರಿದರು.

 ವಿರಾಜಪೇಟೆ :  ತಿತಿಮತಿ ಸರ್ಕಾರಿ ಪಿಯು ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು.

ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ. ರಾಜೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಶುಭ ಕೋರಿದರು.

ತಿತಿಮತಿ ವಿಎಸ್ಎಸ್‌ಎನ್ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು. ಮತ್ತು ವಿದ್ಯಾರ್ಥಿ ಸಂಘದಲ್ಲಿ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.

ಸಮಾಜ ಸೇವಕ ಮನು ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತನ್ನು ಪಾಲಿಸಬೇಕು. ಜೀವನದ ಪ್ರತೀ ಹಂತದಲ್ಲೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಮಾರ್ಗದರ್ಶನವನ್ನು ಮಾಡಿದರು.

ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಅನೂಪ್ ಕುಮಾರ್, ತಿತಿಮತಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಮಂಗಳ ಇದ್ದರು.

ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣವು ನಡೆಯಿತು. ಕಾಲೇಜು ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ ಹೇಮಾವತಿ ಸ್ವಾಗತಿಸಿದರು. ಪಲ್ಲವಿ ನಿರೂಪಿಸಿದರು. ಪೃಥ್ವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು