ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ
ಯಾರೂ ಎಷ್ಟೇ ಟೀಕಿಸಲಿ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಸರ್ವರು ಪಕ್ಷಾತೀತವಾಗಿ ಪಡೆಯಲಾರಂಭಿಸಿದ್ದಾರೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.ಗುರುವಾರ ಪಟ್ಟಣದ ದುರ್ಗಾ ನಗರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಿಸಿಎಂ ಇಲಾಖೆಯ ವಿವಿಧ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಇಂದು ಹಳಿಯಾಳ ತಾಲೂಕಿನಲ್ಲಿ 28.582 ಗ್ರಾಹಕರು ವಿದ್ಯುತ್ ಸಂಪರ್ಕ ಹೊಂದಿದ್ದು, ಅದರಲ್ಲಿ ಕೇವಲ 132 ಗ್ರಾಹಕರು ಮಾತ್ರ ವಿದ್ಯುತ್ ಬಿಲ್ ಪಾವತಿಸುತ್ತಿದ್ದಾರೆ. ಇಂದು ಗ್ಯಾರಂಟಿ ಯೋಜನೆಗಳಿಂದ ಬಡವರ, ಶೊಷಿತರ ಬದುಕು ಹಸನಾಗಿದೆ ಎಂಬ ಸತ್ಯವನ್ನು ಎಲ್ಲರೂ ಒಪ್ಪುತ್ತಾರೆ ಎಂದರು.ಚುನಾವಣಾ ಸಮಯದಲ್ಲಿ ನೀಡಿದ ವಾಗ್ದಾನದಂತೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ದೇಶದಲ್ಲಿ ಗ್ಯಾರಂಟಿ ಯೋಜನೆಗಳನ್ನು ಮೊದಲ ಬಾರಿಗೆ ಜಾರಿಗೊಳಿಸಿದ್ದು ನಮ್ಮ ರಾಜ್ಯದಲ್ಲಿ ಅದೂ ನಮ್ಮ ಕಾಂಗ್ರೆಸ್ ಪಕ್ಷದಿಂದ. ಅಂದೂ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳು ಸಹ ಇಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾರಂಭಿಸಿವೆ ಎಂದರು. ಮೂಲಭೂತ ಸೌಲಭ್ಯ:
ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್, ಪದವಿ ಶಿಕ್ಷಣ ಸೌಲಭ್ಯವಿರುವುದಿಂದ ನೆರೆಯ ತಾಲೂಕು, ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಳಿಯಾಳ ಬರುತ್ತಿದ್ದು, ಇಂದು ಹಳಿಯಾಳ ಶೈಕ್ಷಣಿಕ ಕೇಂದ್ರವಾಗಿಯೂ ಗುರುತಿಸಲ್ಪಡುತ್ತಿದೆ ಎಂದರು.
ಶಿಲಾನ್ಯಾಸ:
ಹಳಿಯಾಳ ಪುರಭವನದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಶಿಕ್ಷಣ ಇಲಾಖೆಯಿಂದ 85 ವಿಕಲಚೇನತರಿಗೆ ಸಾಧನ ಸಲಕರಣೆ ವಿತರಣೆಗೆ ಚಾಲನೆ ನೀಡಿದರು.