ಯುವನಿಧಿ ಸೌಲಭ್ಯ ಅರ್ಹರು ಪಡೆಯಲಿ: ಬಿ.ಬಿ. ಅಸೂಟಿ ಸಲಹೆ

KannadaprabhaNewsNetwork |  
Published : Mar 14, 2026, 02:15 AM IST
ಕಾರ್ಯಕ್ರಮದಲ್ಲಿ ಬಿ.ಬಿ. ಅಸೂಟಿ ಮಾತನಾಡಿದರು. | Kannada Prabha

ಸಾರಾಂಶ

ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿ ಜತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ.

ಗದಗ: ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು. ಯುವಕರು ಉದ್ಯೋಗ ತರಬೇತಿ ಜತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.ನಗರದ ಆದರ್ಶ ಶಿಕ್ಷಣ ಸಮಿತಿ ವಾಣಿಜ್ಯ ಮಹಾವಿದ್ಯಾಲಯದ ಎಸ್.ಜೆ. ಹಾಲ್‌ನಲ್ಲಿ ಇತ್ತೀಚೆಗೆ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ಆದರ್ಶ ಶಿಕ್ಷಣ ಸಮಿತಿ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಸಮಾಲೋಚನೆ ಮತ್ತು ಉದ್ಯೋಗಕೋಶ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ, ಯುವನಿಧಿ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿ ಜತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ರಾಜ್ಯ ಸರ್ಕಾರ 2023ರ ಚುನಾವಣೆ ಪೂರ್ವದಲ್ಲಿಯೇ 5 ಗ್ಯಾರಂಟಿಗಳನ್ನು ಉಚಿತವಾಗಿ ಕೊಡುವ ಕುರಿತು ಭರವಸೆ ನೀಡಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಅವರ ಬದುಕನ್ನು ಹಸನಾಗಿಸಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹3000 ಮತ್ತು ಡಿಪ್ಲೊಮಾ ಹೊಂದಿರುವವರಿಗೆ ₹1,500 ಮಾಸಿಕ ಭತ್ಯೆಯನ್ನು ಗರಿಷ್ಠ 2 ವರ್ಷಗಳವರಗೆ ಅಥವಾ ಉದ್ಯೋಗ ಸಿಗುವವರೆಗೆ ಒದಗಿಸುತ್ತದೆ. ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಹಾಯಕವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕೆಂದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಯುವನಿಧಿ ಯೋಜನೆಯು ಯುವಕರಿಗೆ ಡಿಗ್ರಿ ಮುಗಿದ ನಂತರ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಕರು ಯೋಜನೆಯ ಈ ಹಣವನ್ನು ಪಾಕೆಟ್ ಮನಿ ಎಂದು ಬಳಸಿಕೊಳ್ಳದೇ ಉದ್ಯೋಗಕ್ಕೆ ಸಹಾಯವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಉಪಯೋಗಿಸಬೇಕು ಎಂದರು.

ಈ ವೇಳೆ ಆನಂದ ಹೊಂಬಳ ಅವರು, ರಾಜ್ಯ ಸರ್ಕಾರದ ಯುವನಿಧಿ ಯೋಜನೆ ವೃತ್ತಿ ಮಾರ್ಗದರ್ಶನ ಕುರಿತು ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.ಉದ್ಯೋಗ ವಿನಿಮಯ ಅಧಿಕಾರಿ ಬಸವಂತಪ್ಪ ಪಿ., ಪ್ರಾಂಶುಪಾಲ ಡಾ. ವಿ.ಟಿ. ನಾಯ್ಕರ್, ಆದರ್ಶ ಶಿಕ್ಷಣ ಸಮಿತಿ ಕಾರ್ಯದರ್ಶಿ ಎ.ಡಿ. ಗೋಡಖಿಂಡಿ, ವೃತ್ತಿ ಮಾರ್ಗದರ್ಶನದ ಸಮಾಲೋಚನೆಯ ಮುಖ್ಯಸ್ಥ ಐ.ಎಂ. ಯಾವಗಲ್ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಹಿತ್ಯ ಕ್ಷೇತ್ರದಲ್ಲಿ ಕೊಪ್ಪಳ ರಾಜ್ಯಕ್ಕೆ ಮಾದರಿ : ರಮೇಶ ಬನ್ನಿಕೊಪ್ಪ
ತೊಡೆ ತಟ್ಟಿ ಮಣ್ಣು ಮುಕ್ಕಿಸಿದ ಪೈಲ್ವಾನರು!