ಗ್ಯಾರಂಟಿ ಯೋಜನೆಯಿಂದ ಅರ್ಹರು ವಂಚಿತರಾಗಬಾರದು: ದೊಕಾ

KannadaprabhaNewsNetwork |  
Published : Dec 21, 2024, 01:17 AM IST
ಯಾದಗಿರಿ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶ್ರೇಣಿಕ ಕುಮಾರ್ ಧೊಕಾ ಅಧ್ಯಕ್ಷತೆಯಲ್ಲಿ ಜರುಗಿತು. | Kannada Prabha

ಸಾರಾಂಶ

Those eligible should not be deprived of the guarantee scheme: Doka

-ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯಲ್ಲಿ ಶ್ರೇಣಿಕ ಕುಮಾರ್ ಧೋಕಾ ಸೂಚನೆ

-----

ಕನ್ನಡಪ್ರಭ ವಾರ್ತೆ ಯಾದಗಿರಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಡಿ ಯಾವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶ್ರೇಣಿಕ ಕುಮಾರ್ ಧೋಕಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯೊಂದಿಗೆ ಈ ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿ ಅರ್ಹ ಫಲಾನುಭವಿ ಈ ಯೋಜನೆಯ ಲಾಭ ಪಡೆಯಬೇಕು. ಅಧಿಕಾರಿಗಳು ಈ ದಿಸೆಯಲ್ಲಿ ಅರ್ಹರಿಗೆ ಯೋಜನೆಯ ಲಾಭ ದೊರಕಿಸುವಂತೆ ತಿಳಿಸಿದರು.

ಅನ್ನಭಾಗ್ಯ ಯೋಜನೆ ಅರ್ಹರಿಗೆ ದೊರೆಯುತ್ತಿದೆಯೇ ಎಂಬುದರ ಬಗ್ಗೆ ನ್ಯಾಯಬೆಲೆ ಅಂಗಡಿವಾರು ಪರಿಶೀಲಿಸಬೇಕು. ಅದರಂತೆ ಅರ್ಹ ಪಡಿತರ ಚೀಟಿದಾರರಿಗೆ ನಗದು ಹಣ ವರ್ಗಾವಣೆ ಸೌಲಭ್ಯ ಸಮರ್ಪಕವಾಗಿ ದೊರೆಯುತ್ತಿರುವ ಬಗ್ಗೆಯೂ ನಿರಂತರ ಪರಿಶೀಲಿಸುವ ಜೊತೆಗೆ ತಪ್ಪಿತಸ್ಥ ನ್ಯಾಯಬೆಲೆ ಅಂಗಡಿದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಜಿ.ಎಸ್.ಟಿ, ಆದಾಯ ತೆರಿಗೆದಾರ ಎಂದು ಕಾರಣ ಹೇಳಿ ಯೋಜನೆಯಿಂದ ಹೊರಗುಳಿಸಿದ ಬಗ್ಗೆ ಸಮಗ್ರ ಮಾಹಿತಿ ಒದಗಿಸುವಂತೆ ತಿಳಿಸಿದ ಅವರು, ಸಹಾಯಧನ ಜಮೆಯಾಗದಿರುವ ಬಗ್ಗೆ ನಿಗಾ ಇಟ್ಟು, ಅರ್ಹರು ಈ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕೆಂದರು. ಈ ವೇಳೆ ಗೃಹ ಜ್ಯೋತಿ, ಯುವ ನಿಧಿ ಯೋಜನೆಗಳ ಬಗ್ಗೆ ತಿಳಿಹೇಳಿ, ಅರ್ಹರು ಬಿಟ್ಟು ಹೋಗದಂತೆ ನೋಡಿಕೊಳ್ಳಲು ಸೂಚಿಸಿ ಶಕ್ತಿ ಯೋಜನೆ ಬಗ್ಗೆ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ ಮಾತನಾಡಿ, ಪಂಚಗ್ಯಾರಂಟಿ ಯೋಜನೆಗಳ ಕುರಿತು ನೋಡಲ್ ಅಧಿಕಾರಿವೊಬ್ಬರನ್ನು ನೇಮಿಸಲಾಗುವುದು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಸಮಿತಿ ಉಪಾಧ್ಯಕ್ಷ ಸ್ಯಾಮಸನ್ ಮಾಳಿಕೇರಿ. ರಮೇಶ ದೊರೆ, ಹಳ್ಳಪ್ಪ ಹವಾಲ್ದಾರ್ ನಗನೂರ, ತಾಲೂಕು ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ, ಬೀರಲಿಂಗ್ ಬ್ಯಾದಪುರ, ಸದಸ್ಯರಾದ, ಸಿದ್ದನಗೌಡ ಹಂದರಾಳ, ದಾವೂದ್ ಪಠಾಣ, ಮಾನಪ್ಪ ಸುಗೂರು, ಸಂಜುಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ ಇದ್ದರು.

------

ಫೋಟೋ: ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶ್ರೇಣಿಕ ಕುಮಾರ್ ಧೊಕಾ ಅಧ್ಯಕ್ಷತೆಯಲ್ಲಿ ನಡೆಯಿತು.

20ವೈಡಿಆರ್6:

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ