ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಲೋಕಲ್ ಅಡ್ರೆಸ್ ಕೇಳುವವರು ಮುಂದೆ ಅವರು ಕೇಂದ್ರ ಸಚಿವರಾದ ಬಳಿಕ ಅವರ ಅಡ್ರೆಸ್ ಹುಡುಕಿಕೊಂಡು ಹೋಗುವ ಪ್ರಸಂಗ ಬರುತ್ತದೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ತಿರುಗೇಟು ನೀಡಿದರು.
ಕಾಂಗ್ರೆಸ್‌ನವರು ಗೋಕಾಕ ಹಾಗೂ ಅರಬಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ಪಡೆಯುತ್ತೇವೆ ಎನ್ನುತ್ತಿದ್ದಾರೆ. ಚುನಾವಣೆ ಬಂದಾಗ ಅದು ಸಾಮಾನ್ಯ ಎಂದು ವ್ಯಂಗ್ಯವಾಡಿದರು.ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಪ್ರಚಾರಾರ್ಥವಾಗಿ ಏ.7 ರಂದು ಗೋಕಾಕ ಮತ್ತು ಅರಬಾವಿಯಲ್ಲಿ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗುವುದು. ಈಗಾಗಲೇ ಶೆಟ್ಟರ್ ಅವರು ಗೋಕಾಕ ಮತ್ತು ಅರಬಾವಿಯಲ್ಲಿ ಪ್ರಚಾರ ನಡೆಸಿದ್ದು, ಅವರಿಗೆ ಭಾರೀ ಜನ ಬೆಂಬಲ ವ್ಯಕ್ತವಾಗಿದೆ.
- ಬಾಲಚಂದ್ರ ಜಾರಕಿಹೊಳಿ, ಶಾಸಕರು.