ಅಡ್ಡಮತದಾನ ಮಾಡಿದವರ ಮೇಲೆ ಹೈಕಮಾಂಡ್ ಕಠಿಣ ಕ್ರಮಕೈಗೊಳ್ಳಲಿದೆ. ಈಗಾಗಲೇ ಈ ಬಗ್ಗೆ ರಾಜ್ಯಾಧ್ಯಕ್ಷರು ಉತ್ತರ ನೀಡಿದ್ದು, ಕಮಿಟಿ ಸಹ ರಚಿಸಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹುಬ್ಬಳ್ಳಿ:
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವುದು ದುರದೃಷ್ಟಕರ ಸಂಗತಿ. ದುಡ್ಡಿನ ಆಮಿಷಕ್ಕೆ ಈ ರೀತಿ ಮಾಡಿದ್ದು, ಇದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ಡಮತದಾನ ಮಾಡಿದವರ ಮೇಲೆ ಹೈಕಮಾಂಡ್ ಕಠಿಣ ಕ್ರಮಕೈಗೊಳ್ಳಲಿದೆ. ಈಗಾಗಲೇ ಈ ಬಗ್ಗೆ ರಾಜ್ಯಾಧ್ಯಕ್ಷರು ಉತ್ತರ ನೀಡಿದ್ದು, ಕಮಿಟಿ ಸಹ ರಚಿಸಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಗಮನಿಸುತ್ತಿದ್ದಾರೆ ಎಂದರು.
ಅಡ್ಡ ಮತದಾನ ಮಾಡಿದವರು ಪಕ್ಷದಿಂದ ಆಯ್ಕೆಯಾಗಿರುತ್ತಾರೆ. ಅವರಿಗೆ ನಮಗೆ ಮತ ಹಾಕಬೇಕು ಎಂದು ಹೇಳುವ ಅವಶ್ಯಕತೆ ಇಲ್ಲ. ಹಣದ ಆಸೆ ಹಾಗೂ ಆಮಿಷಕ್ಕೆ ಒಳಪಟ್ಟಿರುವುದು ತಪ್ಪು ಎಂದರು. ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಹಾಗೂ ಮಹಾರಾಷ್ಟ್ರದಲ್ಲಿ ಶಿವಸೇನೆ ಪಕ್ಷಗಳ ಕುಟುಂಬ ರಾಜಕಾರಣ ಹಾಗೂ ಆ ಪಕ್ಷಗಳಲ್ಲಿ ಭವಿಷ್ಯವಿಲ್ಲದ ಕಾರಣ ಅಲ್ಲಿಯ ಶಾಸಕರು, ಸಂಸದರು ಬಿಜೆಪಿಗೆ ಬರುತ್ತಿದ್ದಾರೆ ಎಂದು ಹೇಳಿದರು. ಪಶ್ಚಿಮ ಬಂಗಾಲದಲ್ಲಿ ಭ್ರಷ್ಟಾಚಾರ, ಮಹಿಳೆಯರ ಮೇಲೆ ಅತ್ಯಾಚಾರ, ಜನರ ಸುಲಿಗೆ ಹಾಗೂ ಕುಟುಂಬ ರಾಜಕಾರಣದಿಂದ ಜನರು ಬೇಸತ್ತಿದ್ದರು. ಇಷ್ಟಾದರೂ ಮಮತಾ ಬ್ಯಾನರ್ಜಿ ಅವರು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಅಲ್ಲಿಯ ಜನರು ವಿರೋಧ ವ್ಯಕ್ತವಾಗಬಾರದು ಎಂಬ ಹಿನ್ನೆಲೆ ಶಾಸಕರು ಹಾಗೂ ಸಂಸದರು ಪಕ್ಷ ಬಿಡುತ್ತಿದ್ದಾರೆ ಎಂದು ತಿಳಿಸಿದರು.
ಆರ್‌ಎಸ್‌ಎಸ್ ನೋಂದಣಿ ಅಗತ್ಯವಿಲ್ಲ: ಜೋಶಿ
ನೂರು ವರ್ಷ ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಯಾವುದೇ ನೋಂದಣಿ ಮಾಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಸಚಿವ ಪ್ರಿಯಾಂಕಾ ಖರ್ಗೆ ಅವರು ಹಳೆಯ ರೆಡಿಯೋ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಅಪ್ರಸ್ತುತ. ಈಗಾಗಲೇ ಸಂಘದ ಹಿರಿಯರು ಉತ್ತರ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಪರವಾಗಿ ನಾವು ಇಲ್ಲ. ಬೆಂಗಳೂರು ಅಧೋಗತಿಗೆ ತಂದು ಅವರು ಸಿಎಂ ಆಗಿದ್ದಾರೆ. ಮುಂದೆ ರಾಜ್ಯವೂ ಅದೇ ಸ್ಥಿತಿಗೆ ಬರಲಿದೆ. ರಾಜ್ಯ ಭ್ರಷ್ಟಾಚಾರ ಸರ್ಕಾರವಾಗಿದೆ. ಸ್ವತಃ ಆ ಪಕ್ಷದ ಶಾಸಕರೇ ಆರೋಪ ಮಾಡಿದ್ದಾರೆ ಎಂದು ಕಿಡಿಕಾರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.