ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಕುವೆಂಪು ರಂಗಮಂದಿರದಲ್ಲಿ ಮಹಾನಗರ ಪಾಲಿಕೆ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಜ್ಞಾನ ದಸರಾ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಬದುಕಿನ ಅವಕಾಶಗಳ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.
ಕಾಲೇಜು ಶಿಕ್ಷಣ ಪಡೆಯುತ್ತಿರುವಾಗಲೇ ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡುವ ಸಂಕಲ್ಪ ಹೊಂದಬೇಕು. ಪದವಿ ಪಡೆಯುವ ಅವಧಿಯು ಜೀವನದ ಅಮೂಲ್ಯ ಸಮಯ. ಈ ಹಂತದಲ್ಲಿ ನೀವು ಸರಿಯಾದ ಮಾರ್ಗದಲ್ಲಿ ಮುನ್ನಡೆದು ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಬದುಕಿನಲ್ಲಿ ಯಶಸ್ಸು ಸಾಧಿಸಲು ಆತ್ಮವಿಶ್ವಾಸ ಅತ್ಯಂತ ಮುಖ್ಯ. ಎಂತಹ ಕಠಿಣ ಸನ್ನಿವೇಶ ಎದುರಾದರೂ ಸಮರ್ಥವಾಗಿ ನಿಭಾಯಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಕಂಡಿರುವ ಕನಸು ನನಸು ಮಾಡಿಕೊಳ್ಳಲು ಹಂತ ಹಂತವಾಗಿ ಯೋಜನೆ ಮಾಡಿ ಪೂರ್ಣಗೊಳಿಸುವ ಮೂಲಕ ಗುರಿ ತಲುಪಬೇಕು ಎಂದು ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ಮಾಜಿ ಸದಸ್ಯ, ಉದ್ಯಮಿ ಎಸ್.ರುದ್ರೇಗೌಡ, ತರಬೇತುದಾರ ಸಾಧನಾ ಮಂಜುನಾಥ್, ಮನೋವೈದ್ಯೆ ಡಾ.ಪ್ರೀತಿ.ವಿ.ಶಾನಭಾಗ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರೈತ ದುರ್ಗಪ್ಪ ಅಂಗಡಿ, ಅಂತರಾಷ್ಟ್ರೀಯ ತರಬೇತುದಾರ ಎಸ್.ವಿ.ವೆಂಕಟೇಶ್ ಅವರು ಬದುಕಿನ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.