ಪ್ರಾಚೀನ ವೈದ್ಯ ಪದ್ಧತಿಗೆ ಸಹಕಾರಿಯಾಗುವ ಗಿಡ ನೆಡಲು ಚಿಂತನೆ: ವಡ್ನಾಳ್ ಜಗದೀಶ್

KannadaprabhaNewsNetwork |  
Published : Apr 02, 2026, 02:30 AM IST
'ಸಂಸ್ಕೃತಿ ಕುಂಭ - ಮಲೆನಾಡ ಉತ್ಸವ - 2026' ಆರನೇ ದಿನ ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ ಉದ್ಘಾಟಿಸಲಾಯ್ತು. | Kannada Prabha

ಸಾರಾಂಶ

ಪ್ರತಿಯೊಂದು ಗ್ರಾಪಂಯಲ್ಲಿ ಪಾರ್ಕ್ ನಿರ್ಮಿಸಿ ಅದರಲ್ಲಿ ಅರ್ಧದಷ್ಟು ಪ್ರಾಚೀನ ವೈದ್ಯ ಪದ್ಧತಿಗೆ ಸಹಕಾರಿಯಾಗುವ ಗಿಡಗಳನ್ನು ನೆಡಲು ಚಿಂತಿಸಲಾಗಿದೆ.

ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮದಲ್ಲಿ ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಹೊನ್ನಾವರ

ಪ್ರತಿಯೊಂದು ಗ್ರಾಪಂಯಲ್ಲಿ ಪಾರ್ಕ್ ನಿರ್ಮಿಸಿ ಅದರಲ್ಲಿ ಅರ್ಧದಷ್ಟು ಪ್ರಾಚೀನ ವೈದ್ಯ ಪದ್ಧತಿಗೆ ಸಹಕಾರಿಯಾಗುವ ಗಿಡಗಳನ್ನು ನೆಡಲು ಚಿಂತಿಸಲಾಗಿದ್ದು, ಈಗಾಗಲೇ ಅದು ಕಾರ್ಯರೂಪಕ್ಕೆ ಬಂದಿದೆ ಎಂದು ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ತಿಳಿಸಿದ್ದಾರೆ‌. ತಾಲೂಕಿನ ಗೇರುಸೊಪ್ಪದಲ್ಲಿರುವ ಶ್ರೀ ಕ್ಷೇತ್ರ ಬಂಗಾರಮಕ್ಕಿ ಶ್ರೀ ವೀರಾಂಜನೇಯ ದೇವಸ್ಥಾನದಿಂದ ನಡೆಯುತ್ತಿರುವ ಸಂಸ್ಕೃತಿ ಕುಂಭ - ಮಲೆನಾಡ ಉತ್ಸವ - 2026 ಆರನೇ ದಿನವಾದ ಬುಧವಾರ ನಡೆದ ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಪಂಯಿಂದ ಒಂದೆರಡು ಎಕರೆ ಸ್ಥಳಾವಕಾಶ ಒದಗಿಸಿದರೆ ಪಾರ್ಕ್ ನಿರ್ಮಾಣಕ್ಕೆ ಸಂಪೂರ್ಣ ಅನುದಾನವನ್ನು ಜೀವವೈವಿಧ್ಯ ಮಂಡಳಿಯಿಂದ ಒದಗಿಸಲಾಗುವುದು. ಬಳಿಕ ಪಾರ್ಕ್‌ನ ನಿರ್ವಹಣೆಯ ಜವಾಬ್ದಾರಿ ಗ್ರಾಮ ಪಂಚಾಯಿತಿಯದ್ದಾಗಿರುತ್ತದೆ ಎಂದು ಹೇಳಿದರು. ಅಲೋಪತಿಯ ಕಾಲದಲ್ಲೂ ನಮ್ಮ ದೇಶದಲ್ಲಿ ಪುರಾತನ ಕಾಲದ ಪರಂಪರಾ ಚಿಕಿತ್ಸಾ ಪದ್ಧತಿ ಇನ್ನೂ ಜೀವಂತವಾಗಿದೆ‌. ಮುಂದಿನ ಪೀಳಿಗೆ ಇದನ್ನು ಮುಂದುವರಿಸಬೇಕಾದರೆ ಚಿಕಿತ್ಸೆಗೆ ಬೇಕಾದ ಗಿಡ ಮೂಲಿಕೆಗಳು ಉಳಿಯಬೇಕು. ಇದಕ್ಕಾಗಿ ಪ್ರತಿಯೊಂದು ಗ್ರಾಮದಲ್ಲಿ ಪಾರ್ಕ್ ನಿರ್ಮಿಸಿ ಅದರಲ್ಲಿ ಔಷಧಿ ಗಿಡಗಳನ್ನು ನೆಡಲಾಗುವುದು ಎಂದು ತಿಳಿಸಿದರು. ಪಶ್ಚಿಮ ಘಟ್ಟ ಔಷಧಿ ಗುಣವಿರುವ ಗಿಡಗಳ ಮೂಲಸ್ಥಾನವಾಗಿದೆ. ಪಶ್ಚಿಮ ಘಟ್ಟ ಉಳಿದರೆ ಔಷಧಿ ಗಿಡಗಳನ್ನು ಉಳಿಸಬಹುದು. ಔಷಧಿ ಗಿಡಗಳು ಉಳಿದರೆ ಪ್ರಾಚೀನ ಚಿಕಿತ್ಸಾ ವಿಧಾನ ಉಳಿಯುತ್ತದೆ. ಈ ಶ್ರೇತ್ರದಿಂದ ಪಶ್ಚಿಮ ಘಟ್ಟವನ್ನು ಉಳಿಸುವ ಆಂದೋಲನದ ಜೊತೆಗೆ ಮುಂದಿನ ಪೀಳಿಗೆಗೆ ಪರಂಪರಿಕ ಚಿಕಿತ್ಸಾ ಪದ್ಧತಿಯನ್ನು ತಲುಪಿಸಲು ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಡ್ನಾಳ್‌ ಜಗದೀಶ್‌ ಅವರಿಗೆ, ಬಂಗಾರಮಕ್ಕಿಯಲ್ಲಿ ಸಂಜೀವಿನಿ ಸ್ಥಾಪನೆ, ಔಷಧೀಯ ಸಸ್ಯಗಳ ನರ್ಸರಿ, ಪಶ್ಚಿಮ ಘಟ್ಟ ಜೀವವೈವಿಧ್ಯ ಸಂಶೋಧನೆ ಮತ್ತು ಡಾಕ್ಯುಮೆಂಟೇಶನ್‌ ಕೇಂದ್ರ, ಸಾಂಪ್ರದಾಯಿಕ ಜ್ಞಾನ ಸಂಪಾದನೆ ಯೋಜನೆ ಸೇರಿದಂತೆ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಲಾಯಿತು. ಬಾಲ ವಿಕಾಸ ಅಕಾಡಮಿಯ ಅಧ್ಯಕ್ಷ ಅಡಿವೇಶ್‌ ಇಟಗಿ ಅವರಿಗೆ, ಬಂಗಾರಮಕ್ಕಿಯಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜನೆ, ಮಕ್ಕಳಿಗೆ ಪಶ್ಚಿಮಘಟ್ಟದ ಮಹತ್ವ ಮತ್ತು ಪರಿಸರದೊಂದಿಗೆ ಬದುಕುವ ಕಾರ್ಯಾಗಾರ, ಇಕೊ ಕ್ಲಬ್‌ ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಯಿತು.ರಾಜ್ಯ ಬಾಲ ವಿಕಾಸ ಅಕಾಡಮಿಯ ಅಧ್ಯಕ್ಷ ಅಡಿವೇಶ್‌ ಇಟಗಿ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಮಾರುತಿ ಗುರೂಜಿ ಸಾನಿಧ್ಯ ವಹಿಸಿದ್ದರು. ಮೂಲ ಶಾರದಾ ಪೀಠಮ್‌ ಶ್ರೀ ಕ್ಷೇತ್ರ ಕೂಡಲಿ ಮಠದ ಶ್ರೀಮದ್ ಜಗದ್ಗುರು ಶ್ರೀ ಕೂಡಲಿ ಶೃಂಗೇರಿ, ಶ್ರೀ ಸಿದ್ಧರೂಢ ಮಿಷನ್‌ ಬೆಂಗಳೂರಿನ ಆರೂಢ ಭಾರತಿ ಸ್ವಾಮಿಜಿ ಸಾನಿಧ್ಯ ವಹಿಸಿದ್ದರು. ಚಾಮರಾಜನಗರ ವಿವಿ ಉಪ ಕುಲಪತಿ ಡಾ. ಗಂಗಾಧರ್, ಧಾರವಾಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ ಗೌಡ, ಶಿರಸಿ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥೆ ಡಾ. ರೂಪಾ ಪಾಟೀಲ್, ಮರಾಠಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ್ ಪಾಗೋಜಿ, ಹೊನ್ನಾವರ ಡಿಎಫ್ಒ ಯೋಗೀಶ್ ಸಿ.ಕೆ., ಸಿದ್ಧ ವಿಭಾಗ ಸಿಇಎಂಆರ್ ಮುಖ್ಯಸ್ಥ ಡಾ. ಅರುಲ್ ಅರ್ವಮುದನ್, ಪ್ರಕೃತಿ ಚಿಕಿತ್ಸಾ ತಜ್ಞಾ ಡಾ. ಶಾಮರಾಜ್ ನಿಡುಗಳ, ರಾಯಚೂರು ಯೋಗಾಚಾರ್ಯ ಸುರೇಶ್ ಕುಮಾರ್, ಗೇರುಸೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ನಾಯ್ಕ, ಚಿಂತಕ ಸುಬ್ರಹ್ಮಣ್ಯ ಭಾರತಿ ಕೊಣಾಲೆ, ಪ್ರಾಚೀನ ಆರೋಗ್ಯ ಪರಂಪರಾ ಸಂರಕ್ಷಣಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಎಂ.ಸಾದಿಕ್, ಮ್ಯಾನೇಜಿಂಗ್ ಟ್ರಸ್ಟಿ ಕೆ.ಉಮೇಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟೋಲ್ ಶುಲ್ಕ ಏರಿಕೆ: ಸಾರ್ವಜನಿಕರ ತೀವ್ರ ವಿರೋಧ
ಸ್ಥಳೀಯರ ಸಹಕಾರದಿಂದ ನಯಂಪಳ್ಳಿಯ 50 ಮನೆಗಳಿಗೆ ನೀರು ಸಂಪರ್ಕ