ಮಹದೇಶ್ವರಸ್ವಾಮಿಯ ವಿಜೃಂಭಣೆಯ ಕೊಂಡೋತ್ಸವ

KannadaprabhaNewsNetwork | Published : Feb 28, 2024 2:33 AM

ಸಾರಾಂಶ

ಕಂದೇಗಾಲ ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ಮತ್ತು ಗ್ರಾಮವನ್ನು ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬೆಳಗಿನ ಜಾವದಿಂದಲೇ ಮಹದೇಶ್ವರರಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನಗಳು, ರುದ್ರಾಭಿಷೇಕ ಮಾಡಲಾಯಿತು. ಜಾತ್ರಾ ಮಹೋತ್ಸವ ಅಂಗವಾಗಿ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ ದೇವರ ದೇವರ ಉತ್ಸವಮೂರ್ತಿ ವಿವಿಧ ಹೂವಿನಿಂದ ಅಲಂಕರಿಸಿ ಭಕ್ತರು, ದಾರಿಯುದ್ದಕ್ಕೂ ಭಕ್ತರು ಮಲೆ ಮಹದೇಶ್ವರರಿಗೆ ಜೈಕಾರ ಕೂಗುವ ಮೂಲಕ ದೇವರಿಗೆ ನಮಿಸಿದರು.

ಕನ್ನಡಪ್ರಭ ವಾರ್ತೆ ಸರಗೂರು

ಸಮೀಪದ ಕಂದೇಗಾಲ ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ಅವರ ಜಾತ್ರಾ ಮಹೋತ್ಸವದ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು.

ಸಾವಿರಾರು ಭಕ್ತರು ದೇವರ ಕೊಂಡೋತ್ಸವದಲ್ಲಿ ಪಾಲ್ಗೊಂಡು ವಿವಿಧ ರೂಪದದಲ್ಲಿ ಹರಕೆ ತೀರಿಸಲಾಯಿತು,

ಮಂಗಳವಾರ ನಡೆದ ಜಾತ್ರೆಯಲ್ಲಿ ದೇವರಿಗೆ ಪಂಜಿನ ಸೇವೆ, ಮಹಾಮಂಗಳಾರತಿ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ಹಂಚೀಪುರ ಮಠಾಧ್ಯಕ್ಷ ಚನ್ನಬಸವ ಸ್ವಾಮೀಜಿ, ದಡದಹಳ್ಳಿ ಮಠದ ಷಡಕ್ಷರಿ ಸ್ವಾಮೀಜಿ, ಪಡುವಲು ವಿರಕ್ತಮಠದ ಮಹದೇವ ಸ್ವಾಮೀಜಿ, ಪುರ ಮಠದ ನಾಗೇಂದ್ರ ಸ್ವಾಮಿಜಿ ಸಾನ್ನಿಧ್ಯ ವಹಿಸಿದ್ದರು.

ಕಂದೇಗಾಲ ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ಮತ್ತು ಗ್ರಾಮವನ್ನು ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬೆಳಗಿನ ಜಾವದಿಂದಲೇ ಮಹದೇಶ್ವರರಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನಗಳು, ರುದ್ರಾಭಿಷೇಕ ಮಾಡಲಾಯಿತು. ಜಾತ್ರಾ ಮಹೋತ್ಸವ ಅಂಗವಾಗಿ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ ದೇವರ ದೇವರ ಉತ್ಸವಮೂರ್ತಿ ವಿವಿಧ ಹೂವಿನಿಂದ ಅಲಂಕರಿಸಿ ಭಕ್ತರು, ದಾರಿಯುದ್ದಕ್ಕೂ ಭಕ್ತರು ಮಲೆ ಮಹದೇಶ್ವರರಿಗೆ ಜೈಕಾರ ಕೂಗುವ ಮೂಲಕ ದೇವರಿಗೆ ನಮಿಸಿದರು. ವೀರಗಾಸೆ ಕುಣಿತ, ವಾದ್ಯಗೋಷ್ಠಿಗಳು ಮೊಳಗಿದವು. ಸತ್ತಿಗೆ ಸೂರಿಪಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಉತ್ಸವ ಮೂರ್ತಿಯು ದೇವಸ್ಥಾನದ ಬಳಿಗೆ ಬಂದ ಕೂಡಲೇ ದೇವಸ್ಥಾನ ಸುತ್ತು ಪ್ರದಕ್ಷಿಣೆ ಹಾಕಲಾಯಿತು. ನಂತರ ಕೊಂಡೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ, ನೂರಾರು ಭಕ್ತರು ಕೆಂಡದ ಮೇಲೆ ನಡೆದು ಹರಕೆ ತೀಸಿದರು.

ಕಂದೇಗಾಲ ಗ್ರಾಮದ ಸುತ್ತ ಮುತ್ತಲಿನಿಂದ ಕೊಂಡೋತ್ಸವ ನೋಡಲು ಸಾವಿರಾರು ಭಕ್ತರು ನೆರೆದಿದ್ದರು. ತಮ್ಮ ಇಷ್ಟಾರ್ಥ ಸಿದ್ದಿಗೆ ಹೊತ್ತ ಹರಕೆ ತಿರಿಸಿದರು. ಸರತಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿ, ತಾಯಿಯ ಕೃಪೆಗೆ ಪಾತ್ರರಾದರು. ಭಕ್ತರಿಗೆ ಅನ್ನ ಸಂರ್ತಪಣೆ ನೆರವೇರಿತು.

ಜಿಪಂ ಮಾಜಿ ಸದಸ್ಯ ಕೆ. ಚಿಕ್ಕವೀರನಾಯಕ, ಪಟೇಲ್ ರಾಜಪ್ಪ, ಸೋಮಣ್ಣ, ರವೀಶ್, ಕೆ.ವಿ. ರುದ್ರಯ್ಯ, ಮಾದಪ್ಪ, ರವಿ ಅರಸ್, ಕಾಳಸ್ವಾಮಿ, ಮಹೇಶ್, ಇದ್ದರು.

Share this article