- ಶಿವಶಾಂತವೀರ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವ ನಿಮಿತ್ತ ಕಾರ್ಯಕ್ರಮ
- ದಾರಿಯುದ್ದಕ್ಕೂ ತಂಪು ಪಾನೀಯ, ಐಸ್ ಕ್ರೀಮ್ ವಿತರಣೆ ಕನ್ನಡಪ್ರಭ ವಾರ್ತೆ ಕೊಪ್ಪಳ
ಗವಿಮಠದ 17ನೇ ಪೀಠಾಧಿಪತಿ ಹಾಗೂ ತಮ್ಮ ಗುರು ಆಗಿರುವ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ 22ನೇ ಪುಣ್ಯ ಸ್ಮರಣೆ ನಿಮಿತ್ತ ಶ್ರೀ ಗವಿಸಿದ್ಧೇಶ್ವರ ಶ್ರೀಗಳು ನಡೆಸಿದ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಹೆಜ್ಜೆ ಹಾಕಿದರು.ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ನಂತರ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿ, ಪಾದಯಾತ್ರೆಗೆ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು.
ಇವರ ಜೊತೆಗೆ ಚಿಕ್ಕೇನಕೊಪ್ಪದ ಶರಣರು ಹಾಗೂ ಹಡಗಲಿಯ ಗವಿಮಠದ ಶಾಖಾ ಮಠದ ಸ್ವಾಮೀಜಿ ಹಿರೇಶಾಂತವೀರ ಮಹಾಸ್ವಾಮಿಗಳು ಪಾದಯಾತ್ರೆ ಮಾಡಿದರು. ಅದರಲ್ಲೂ ಚಿಕ್ಕೇನಕೊಪ್ಪದ ಶರಣರು ಭಜನೆ ಮಾಡುತ್ತಾ ಹೆಜ್ಜೆ ಹಾಕಿದರು.
ದಾರಿಯುದ್ದಕ್ಕೂ ಹೂ:
ರಸ್ತೆಯ ಎರಡು ಬದಿಯಲ್ಲಿ ನಿಂತು ಪಾದಯಾತ್ರೆಗೆ ಶುಭ ಕೋರುತ್ತಿರುವುದು ಕಂಡು ಬಂತು.
ಪಾದಯಾತ್ರೆಯಲ್ಲಿ ಅನೇಕ ಮುಖಂಡರು ಭಾಗವಹಿಸಿದ್ದರು. ಅದರಲ್ಲೂ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.