ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮೇ27 ರಂದು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಮುಲ್‌ನಲ್ಲಿ ಐಸ್‌ಕ್ರೀಂ ಘಟಕ ಸ್ಥಾಪನೆ ವಿರೋಧಿಸಿ ನಡೆದ ರೈತ ಸಂಘದ ಪ್ರತಿಭಟನೆಯಲ್ಲಿ ರೈತ ಸಂಘದ ಹೊನ್ನೂರು ಪ್ರಕಾಶ್ ಮುಖ್ಯಮಂತ್ರಿಗಳನ್ನು ಸಂಭೋದಿಸಿ ಇಲ್ಲೇ ಮುಖ್ಯಮಂತ್ರಿ ಕಾಲು, ಬಾಲ ಕಟ್ಟು ಮಾಡುತ್ತೇವೆ'''''''' ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಸಾರ್ವಜನಿಕವಾಗಿ ಬೆದರಿಕೆವೊಡ್ಡುವ ಮಾತುಗಳನ್ನಾಡಿ ಹಿಂದುಳಿದ ವರ್ಗಗಳ ನಾಯಕ ಹಾಗೂ ರೈತ ಸಂಘಟನೆಗಳ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘನತೆಗೆ, ಸರ್ಕಾರದ ಘನತೆಗೆ ಕುಂದು ಉಂಟು ಮಾಡುವಂತೆ ಪದಪ್ರಯೋಗ ಮಾಡಿರುವುದು ಸರಿಯಲ್ಲ. ಮುಖ್ಯಮಂತ್ರಿಗಳ ವಿರುದ್ಧ ಅಸಂವಿಧಾನಿಕ ಪದ ಪ್ರಯೋಗ ಮಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿರುವ ದೂರಿನಲ್ಲಿ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಬೆಳ್ಳೇಗೌಡ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಜಿಪಂ ಮಾಜಿ ಸದಸ್ಯ ರಮೇಶ್, ತಾಪಂ ಮಾಜಿ ಸದಸ್ಯರಾದ ಮಹದೇವಶೆಟ್ಟಿ, ರಾಜೇಂದ್ರಸ್ವಾಮಿ, ಚಾಮುಲ್ ನಿರ್ದೇಶಕ ರೇವಣ್ಣ, ಮಹದೇವಪ್ರಸಾದ್ ಫಸಿ, ಸೊತ್ತನಹುಂಡಿ ಎಂ.ಸೋಮಣ್ಣ, ಕುದೇರು ಲಿಂಗಣ್ಣ, ತಮ್ಮಡಹಳ್ಳಿಗೌಡ, ತಾಲೂಕು ಕುರುಬರ ಸಂಘದ ನಿರ್ದೇಶಕ ಹೊಮ್ಮ ಶಿವಕುಮಾರ್, ಮನೋಜ್, ಶಿವಮೂರ್ತಿ ನಂಜೇದೇವನಪುರ ಇತರರು ಹಾಜರಿದ್ದರು.