ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ಅವರನ್ನು ವಂಚಕನೊಬ್ಬ ಲೋಕಾಯುಕ್ತ ಡಿವೈಎಸ್ಪಿ ಶಿವಪ್ರಸಾದ್ ಎಂಬ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾನೆ.
ಕನ್ನಡಪ್ರಭ ವಾರ್ತೆ ರಾಮನಗರವಂಚಕನೊಬ್ಬ ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಬೆದರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ಅವರನ್ನು ವಂಚಕನೊಬ್ಬ ಲೋಕಾಯುಕ್ತ ಡಿವೈಎಸ್ಪಿ ಶಿವಪ್ರಸಾದ್ ಎಂಬ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾನೆ.ನಾವು ಕೇಳಿದಷ್ಟು ಹಣ ಕೊಡದಿದ್ದರೆ ನಾಳೆಯೇ ಮನೆ, ಕಚೇರಿ ಮೇಲೆ ದಾಳಿ ನಡೆಸುತ್ತೇವೆ. ಇದೆಲ್ಲ ಬೇಡ ಅನ್ನುವುದಾದರೆ ಹೊರಗಡೆ ಇತ್ಯರ್ಥ ಮಾಡಿಕೊಳ್ಳೋಣ. ಇದಕ್ಕಾಗಿ ತಕ್ಷಣ 60 ಸಾವಿರ ಹಣ ಆನ್ ಲೈನ್ ಪೇಮೆಂಟ್ ಮಾಡುವಂತೆ ವಂಚಕ ಹೆದರಿಸಿದ್ದಾನೆ.ಇದರಿಂದ ಅನುಮಾನಗೊಂಡ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರರವರು ಲೋಕಾಯುಕ್ತ ಕಚೇರಿಗೆ ಭೇಟಿನೀಡಿ ಮಾಹಿತಿ ಪಡೆದಿದ್ದು, ಬಳಿಕ ಅಧಿಕಾರಿ ಹೆಸರಲ್ಲಿ ಅನಾಮಿಕ ವ್ಯಕ್ತಿ ಕರೆಮಾಡಿರೋದು ಗೊತ್ತಾಗಿದೆ. ಈ ಬಗ್ಗೆ ಐಜೂರು ಪೊಲೀಸ್ ಠಾಣೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರು ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
-------ನಕಲಿ ಅಧಿಕಾರಿಗಳು, ನಕಲಿ ಪತ್ರಕರ್ತರ ವಿರುದ್ಧ ಕ್ರಮ ವಹಿಸಿರಾಮನಗರ:ನಗರದಲ್ಲಿ ಹೆಚ್ಚಾಗಿರುವ ನಕಲಿ ಲೋಕಾಯುಕ್ತ ಅಧಿಕಾರಿಗಳು, ಆರ್‌ಟಿಐ ಕಾರ್ಯಕರ್ತರು ಮತ್ತು ನಕಲಿ ಪತ್ರಕರ್ತರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಒತ್ತಾಯಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು, ಆರ್ ಟಿಐ ಹಾಗೂ ಪತ್ರಕರ್ತರ ಹೆಸರಿನಲ್ಲಿ ಬೆದರಿಸುವ ಚಾಳಿ ಹೆಚ್ಚಾಗಿದೆ. ಇದಕ್ಕೆಲ್ಲ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಎಂದರು. ಕಳೆದ ವಾರ ವಂಚಕರು ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸುತ್ತೇವೆ. ಇದು ಬೇಡ ಎನ್ನುವುದಾದರೆ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವಿಚಾರವಾಗಿ ಯೋಜನಾಧಿಕಾರಿ ಸುರೇಂದ್ರರವರು ನನಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆನಂತರ ಸುರೇಂದ್ರ ಅವರು ವಂಚಕನ ಮೊಬೈಲ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದೇವೆ.ಆ ವಂಚಕ ಬೇರೆ ಅಧಿಕಾರಿಗಳಿಗೂ ಧಮ್ಕಿ ಹಾಕಿ ಹಣ ಪಡೆದಿರುವುದು ಗೊತ್ತಾಗಿದೆ. ಸರ್ಕಾರಿ ಅಧಿಕಾರಿಗಳು ಹೆದರುವುದು ಬೇಡ. ಲೋಕಾಯುಕ್ತರು, ಪತ್ರಕರ್ತರು ಹಾಗೂ ಆರ್ ಟಿಇ ಕಾರ್ಯಕರ್ತರ ಹೆಸರೇಳಿಕೊಂಡು ಹೆದರಿಸಿದರೆ ತಕ್ಷಣ ಸರ್ಕಾರಿ ನೌಕರರ ಸಂಘದ ಗಮನಕ್ಕೆ ತರುವಂತೆ ಮನವಿ ಮಾಡಿದರು.ಪೊಲೀಸ್ ಇಲಾಖೆ ನಕಲಿ ಲೋಕಾಯುಕ್ತರು, ಪತ್ರಕರ್ತರು ಹಾಗೂ ಆರ್ ಟಿಇ ಕಾರ್ಯಕರ್ತರ ವಿರುದ್ಧ ಕೂಡಲೇ ಕ್ರಮ ವಹಿಸಬೇಕು. ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವ ಜೊತೆಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೆ.ಸತೀಶ್ ಒತ್ತಾಯಿಸಿದರು.--------30ಕೆಆರ್ ಎಂಎನ್ 6.ಜೆಪಿಜಿಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಸುದ್ದಿಗಾರರೊಂದಿಗೆ ಮಾತನಾಡಿದರು.--------
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.