ಛಲವಾದಿಗೆ ಬೆದರಿಕೆ ಸಂಪ್ರದಾಯ ಸರಿಯಲ್ಲ: ಸಂಸದ ಕಿಡಿ

KannadaprabhaNewsNetwork |  
Published : Nov 13, 2026, 01:30 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಆನ್‌ಲೈನ್ ಮೂಲಕ ಚಾಕುಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಆನ್‌ಲೈನ್ ಮೂಲಕ ಚಾಕುಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಸುಮಾರು ₹60 ಸಾವಿರ ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಗಳಿಗೆ ಬಳಸಿ ಈ ಸಮುದಾಯಗಳಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ, ಶಿಕ್ಷಣ, ಆರೋಗ್ಯ ಹಾಗೂ ಅಲೆಮಾರಿ ಸಮುದಾಯಗಳ ಬದುಕು ಸುಧಾರಣೆಗೆ ಮೀಸಲಿಟ್ಟ ಹಣ ಆಯಾ ಸಮುದಾಯಗಳ ಅಭಿವೃದ್ಧಿಗೆ ಬಳಸಬೇಕಿತ್ತು. ಆದರೆ, ಸರ್ಕಾರ ಅನುದಾನ ಬೇರೆ ಉದ್ದೇಶಗಳಿಗೆ ವಿನಿಯೋಗಿಸಿರುವುದು ಅನ್ಯಾಯದ ಕ್ರಮ. ಒಂದು ಕಡೆ ಬಡವರಿಗೆ ನ್ಯಾಯ ಒದಗಿಸಿಲ್ಲ, ಮತ್ತೊಂದೆಡೆ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎಂದು ದೂರಿದರು.ಪರಿಶಿಷ್ಟ ಜಾತಿ ಸಮುದಾಯದ ಪರವಾಗಿ ಧ್ವನಿ ಎತ್ತುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರಿಗೆ ಚಾಕುಗಳನ್ನು ಕಳುಹಿಸಿ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಪರಿಶಿಷ್ಟ ಜಾತಿ ಮುಖಂಡರೊಬ್ಬರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೇರಿರುವುದನ್ನು ಸಹಿಸದೆ ಇಂತಹ ಬೆದರಿಕೆ ತಂತ್ರಗಳಿಗೆ ಇಳಿದಿರುವುದು ಸರಿಯಲ್ಲ. ಬೆದರಿಕೆ, ಗೂಂಡಾಗಿರಿ ಹಾಗೂ ವಿರೋಧ ಪಕ್ಷದ ಧ್ವನಿ ಹತ್ತಿಕ್ಕುವ ಪ್ರಯತ್ನ ರಾಜ್ಯದ ಜನತೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.ವಿರೋಧ ಪಕ್ಷದ ನಾಯಕರ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂತಹ ಘಟನೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬೆದರಿಕೆ ಕೃತ್ಯ ಸಮರ್ಥಿಸಿಕೊಳ್ಳುವ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಬಡವರಿಗೆ ಅನ್ಯಾಯ ಮಾಡಿ, ಅಭಿವೃದ್ಧಿ ಅನುದಾನ ಬೇರೆ ಉದ್ದೇಶಗಳಿಗೆ ಬಳಸಿ ವಿರೋಧ ಪಕ್ಷದ ನಾಯಕರಿಗೂ ಬೆದರಿಕೆ ಹಾಕಿದರೆ ಸರ್ಕಾರ ಹೆಚ್ಚು ದಿನ ಉಳಿಯಲು ಸಾಧ್ಯ ವಿಲ್ಲ. ಇಂತಹ ಬೇಜವಾಬ್ದಾರಿ ವರ್ತನೆಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಿಗೆ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಅನಾಮಿಕ ವ್ಯಕ್ತಿಗಳು ಆನ್‌ಲೈನ್ ಮೂಲಕ ಚಾಕುಗಳನ್ನು ಕಳುಹಿಸಿರುವುದು ಜನಪ್ರತಿನಿಧಿಗಳ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಆತಂಕಕಾರಿ ಸಂಗತಿ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಕೃತ್ಯ ದಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಸಂತೋಷ್ ಕೊಟ್ಯಾಯನ್, ಕೆ.ಎ.ವೆಂಕಟೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌