ಪತ್ರಕರ್ತರಿಗೆ ಧಮ್ಕಿ: ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : Dec 18, 2024, 12:47 AM IST
ಪೋಟೋ 6 : ನೆಲಮಂಗಲ ತಾಲ್ಲೂಕು ಕಚೇರಿ ಎದುರು ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ಗಡಿಪಾರು ಮಾಡುವಂತೆ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ನೆಲಮಂಗಲ: ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನೆಲಮಂಗಲ: ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪತ್ರಕರ್ತರ ಪ್ರತಿಭಟನೆಗೆ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಬೆಂಬಲ ನೀಡಿ, ರೌಡಿ ಶೀಟರ್, ಬಿಜೆಪಿ ನಾಯಕ ಜಗದೀಶ್‌ ಚೌಧರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರನ್ನು ರಕ್ಷಣೆ ಮಾಡಬೇಕು. 3 ದಿನಗಳ ಹಿಂದೆ ಟಿ.ಬೇಗೂರು ಗ್ರಾಪಂ ಸದಸ್ಯರೊಬ್ಬರು ಭ್ರಷ್ಟ ಅಧಿಕಾರಿಗಳಿಗೆ ಜಗದೀಶ್ ಚೌಧರಿ ಬೆಂಬಲ ನೀಡಬಾರದು ಎಂದು ಹೇಳಿದ್ದನ್ನು ಸುದ್ದಿ ಮಾಡಿದ್ದ ಪತ್ರಕರ್ತರನ್ನು ಅವಾಚ್ಚ ಶಬ್ಧಗಳಿಂದ ನಿಂದಿಸಿ, ಸುದ್ದಿ ಮಾಡಿದ ಪತ್ರಕರ್ತರನ್ನು ಬಿಡುವುದಿಲ್ಲ ಎಂದು ಧಮ್ಕಿ ಹಾಕಿ, ಪತ್ರಕರ್ತರು ರೋಲ್ ಕಾಲ್ ಮಾಡಿದ್ದಾರೆಂದು ಸಾರ್ವಜನಿಕವಾಗಿ ನಿಂದಿಸಿ, ಪ್ರಶ್ನೆ ಮಾಡಿದ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಹಚರರ ಮೂಲಕ ತೇಜೋವಧೆ ಮಾಡಲು ಪತ್ರಕರ್ತರ ಕುಟುಂಬ ಸದಸ್ಯರ ಭಾವಚಿತ್ರಗಳನ್ನು ಹರಿಬಿಟ್ಟು ಹೆದರಿದ್ದಾರೆ. ಹಾಗಾಗಿ ಜಗದೀಶ್‌ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಡಿವೈಎಸ್ಪಿ ಜಗದೀಶ್ ಹಾಗೂ ತಹಸೀಲ್ದಾರ್ ಅಮೃತ್ ಅತ್ರೇಶ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್, ಪ್ರಧಾನ ಕಾರ್ಯದರ್ಶಿ ಆಶಾಸೀನಪ್ಪ, ರಾಜ್ಯ ಕಾರ್ಯದರ್ಶಿ ಕೊಟ್ರೇಶ್, ಜಿಲ್ಲಾಧ್ಯಕ್ಷ ಮಂಜುನಾಥ್, ತುಮಕೂರು ಜಿಲ್ಲಾ ಗೌರವಾಧ್ಯಕ್ಷ ಸುಧೀಂದ್ರ, ಬೆಂಗಳೂರು ನಗರ ಅಧ್ಯಕ್ಷ ಭಾನುಪ್ರಕಾಶ್, ತಾಲೂಕು ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ವಿಜಯ್ ಹೊಸಪಾಳ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಬೂದಿಹಾಳ್ ಕಿಟ್ಟಿ, ಉಪಾಧ್ಯಕ್ಷ ರುದ್ರೇಶ್ ಹೊನ್ನೇನಹಳ್ಳಿ, ಕಾರ್ಯನಿರತ ಪತ್ರಕರ್ತರ ಸಂಘದ ಪ್ರದೀಪ್ ಕುಮಾರ್, ರಾಜಶೇಖರ್, ಮಿಲ್ಟ್ರಿ ಮಾಮ, ಹರೀಶ್, ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ವೇಣು, ವಂದನಾ, ವರ್ಷ, ಕವಿತಾ, ಉಮೇಶ್ ಪೂಜಾರ್, ಅರುಣ್ ಕುಮಾರ್ ಇತರರು ಉಪಸ್ಥಿತರಿದ್ದರು.

ಪೋಟೋ 6 :

ನೆಲಮಂಗಲ ತಾಲೂಕು ಕಚೇರಿ ಎದುರು ಪತ್ರಕರ್ತರಿಗೆ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಹಸೀಲ್ದಾರ್‌ ಅಮೃತ್ ಅತ್ರೇಶ್‌ಗೆ ಮನವಿ ಸಲ್ಲಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ