ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿನ ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ರಥೋತ್ಸವದ ಹಾದಿಯಲ್ಲಿ ಕಾರು ಅಡ್ಡಗಟ್ಟಿ ಗಲಾಟೆ ಮಾಡಿದ್ದಲ್ಲದೆ, ಪ್ರಶ್ನಿಸಿದವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮೂವರು ಯುವಕರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಭಕ್ತಾದಿಗಳು ಹಾಗೂ ಜಾತ್ರಾ ಕಮಿಟಿಯ ಸದಸ್ಯರು ರಥ ಸಾಗಲು ಅನುವು ಮಾಡಿಕೊಡುವಂತೆ ಮತ್ತು ಕಾರನ್ನು ಪಕ್ಕಕ್ಕೆ ಸರಿಸುವಂತೆ ವಿನಂತಿಸಿದ್ದಾರೆ. ಆದರೆ ಈ ವೇಳೆ ಕಿರಿಕ್ ಮಾಡಿದ ತಂಡವು ಕಾರು ಸರಿಸಲು ನಿರಾಕರಿಸಿದ್ದಲ್ಲದೆ, ಜಾತ್ರಾ ಕಮಿಟಿಯ ಯುವಕರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.
ಕಾರು ತೆರವುಗೊಳಿಸುವಂತೆ ಕೇಳಿದ್ದಕ್ಕೆ ಆಕ್ರೋಶಗೊಂಡ ಆರೋಪಿಗಳು ಜಾತ್ರಾ ಕಮಿಟಿಯ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಗದಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.ಜಾತ್ರಾ ಕಮಿಟಿ ಸದಸ್ಯರು ನೀಡಿದ ದೂರಿನನ್ವಯ ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲಾಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಂಭ್ರಮದ ಜಾತ್ರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿ ಸಾರ್ವಜನಿಕ ಶಾಂತಿಗೆ ಭಂಗ ತಂದವರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸವ ಕೇಂದ್ರದಲ್ಲಿ ವಚನಗೋಷ್ಠಿ