ಕನ್ನಡಪ್ರಭ ವಾರ್ತೆ ಮಂಡ್ಯ
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಜೆ.ಸೈಯದ್ ಅಹಮದ್ (೪೩) ಹಾಗೂ ಬೆಂಗಳೂರು ಕೆ.ಆರ್.ಪುರಂನ ದೇವಸಂದ್‌ರ ವಾಸಿ ತಸ್ಲೀಂಪಾಷ (೪೩) ಮನೆಗಳ್ಳತನ ಆರೋಪದಡಿ ಬಂಧಿತರಾಗಿದ್ದರೆ, ಬೆಂಗಳೂರಿನ ಬನ್ನೇರುಘಟ್ಟದ ಪಿಳ್ಳಗಾನಹಳ್ಳಿಯ ಮುನಾಜೀರ್ (೪೫) ವೃದ್ಧ ಮಹಿಳೆಯರನ್ನು ವಂಚಿಸಿ ಚಿನ್ನಾಭರಣ ದೋಚಿದ ಆರೋಪಕ್ಕೆ ಗುರಿಯಾಗಿದ್ದಾನೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಳವಳ್ಳಿ ತಾಲೂಕು ಹೊಸದೊಡ್ಡಿ ಗ್ರಾಮದ ಪುಟ್ಟ ವೆಂಕಯ್ಯರವರ ಮನೆಯಿಂದ ೪.೯೦ ಲಕ್ಷ ರು. ಮೌಲ್ಯದ ಒಟ್ಟು ೭೫ ಗ್ರಾಂ ಚಿನ್ನಾಭರಣ ಕಳವಾಗಿರುವ ಪ್ರಕರಣ ದಾಖಲಾಗಿತ್ತು. ಈ ದೂರನ್ನು ಆಧರಿಸಿ ತನಿಖೆ ಕೈಗೊಂಡಾಗ ಸೈಯದ್ ಅಹಮದ್ ಮತ್ತು ತಸ್ಲೀಂಪಾಷ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಮಳವಳ್ಳಿ, ಮಂಡ್ಯ, ತಲಘಟ್ಟಪುರ, ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿತು ಎಂದು ಹೇಳಿದರು.ಬಂಧಿತರಿಂದ ೩೧೯ ಗ್ರಾಂ ತೂಕದ ಚಿನ್ನದ ಒಡವೆಗಳು ೧೩೨ ಗ್ರಾಂ ತೂಕದ ಬೆಳ್ಳಿ ಒಡವೆಗಳು, ಕೃತ್ಯಕ್ಕೆ ಬಳಸಿದ ಕಾರು ಸೇರಿ ೨೫.೬೩ ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ವಿವರಿಸಿದರು.
ಅಪರ ಜಿಲ್ಲಾ ಪೊಲೀಸಸ್ ಅಧೀಕ್ಷಕರಾದ ಸಿ..ಇ.ತಿಮ್ಮಯ್ಯ, ಗಂಗಾಧರಸ್ವಾಮಿ, ಮಳವಳ್ಳಿ ಡಿವೈಎಸ್ಪಿ ವಿ.ಕೃಷ್ಣಪ್ಪ, ಮಳವಳ್ಳಿ ಗ್ರಾಮಾಂತರ ಠಾಣೆ ಪಿಎಸ್‌ಐಗಳಾದ ಶ್ರವಣ್, ಸ.ದಾಸರೆಡ್ಡಿ, ಶಿವಶಂಕರ್, ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್, ಪಿಎಸ್‌ಐ ಲೋಕೇಶ್ ಮತ್ತು ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ತೊಡಗಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಪುಡಿ ರೌಡಿಗಳು ಗುಂಪು ಘರ್ಷಣೆ, ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆ ಹಾಕುವುದು, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬರುತ್ತಿದೆ. ೧೮ ವರ್ಷದೊಳಗಿನವರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅವರನ್ನೂ ಮುಲಾಜಿಲ್ಲದೆ ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.
ನಿರ್ಮಿತಿ ಕೇಂದ್ರದ ನಕಲಿ ವಿದ್ಯಾಭ್ಯಾಸದ ದಾಖಲೆಗಳನ್ನು ಸಲ್ಲಿಸಿ ಹುದ್ದೆಗಳನ್ನು ಪಡೆದಿರುವ ಪ್ರಕರಣವೂ ಸಾಕಷ್ಟು ಪ್ರಗತಿಯಲ್ಲಿದೆ. ಅದರ ಬಗ್ಗೆ ಕೆಲವೇ ದಿನಗಳಲ್ಲಿ ವಿವರವಾದ ಮಾಹಿತಿ ನೀಡುವುದಾಗಿ ಸ್ಪಷ್ಟಪಡಿಸಿದರು.