ಕೆರೆಯಲ್ಲಿ ಈಜಲು ಹೋಗಿದ್ದ ಮೂರು ಬಾಲಕರ ದುರ್ಮರಣ

KannadaprabhaNewsNetwork |  
Published : Oct 07, 2026, 01:15 AM IST
ಕೆರೆ ಬಳಿ ಸೇರಿರುವ ಜನ | Kannada Prabha

ಸಾರಾಂಶ

ಚಿಕ್ಕಮಗಳೂರುಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ಮಂಗಳವಾರ ನಡೆದಿದೆ.

- ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ದುರ್ಘಟನೆ । ಶೋಕದಲ್ಲಿ ಮುಳುಗಿದ ಗ್ರಾಮ ।

--

- ಸ್ಥಳೀಯರ ಪ್ರಯತ್ನ ವಿಫಲ

- ಮುಗಿಲುಮುಟ್ಟಿದ ಆಕ್ರಂದನ

- ಪೊಲೀಸರ ಭೇಟಿ ನೀಡಿ ಪರಿಶೀಲನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ಮರ್ಲೆ ಗ್ರಾಮದ ತರುಣ್, ಭುವನ್ ಹಾಗೂ ಲಿಖಿತ್ ಎಂದು ಗುರುತಿಸಲಾಗಿದೆ. ಮೂವರು ಬಾಲಕರು 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಎಲ್ಲರೂ ಸುಮಾರು 12ವರ್ಷದವರಾಗಿದ್ದು ಒಟ್ಟಿಗೆ ಈಜಲು ತೆರಳಿದ್ದರು.ಶಾಲೆಗೆ ರಜೆ ಇರುವ ಕಾರಣ ಈ ಮೂವರು ಸ್ನೇಹಿತರು ಗ್ರಾಮದ ಹೊರವಲಯದಲ್ಲಿರುವ ಚಿಕ್ಕಕೆರೆಗೆ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೆರೆಯಲ್ಲಿದ್ದ ಗುಂಡಿಯೊಂದರಲ್ಲಿ ಈಜಲು ಇಳಿದ ವೇಳೆ ನೀರಿನ ಆಳ ತಿಳಿಯದೆ ಒಬ್ಬರ ನಂತರ ಮತ್ತೊಬ್ಬರು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ನೀರಿಗಿಳಿದ ಮೂವರೂ ಮುಳುಗಿದ್ದು ಹೊರಬರಲಾಗದೆ ಸಿಲುಕಿ ಮೃತಪಟ್ಟಿದ್ದಾರೆ.ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಕೆರೆಯತ್ತ ಧಾವಿಸಿ ಮಕ್ಕಳನ್ನು ಮೇಲಕ್ಕೆತ್ತಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟ ರ ಲ್ಲಾಗಲೇ ಮೂವರು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನೆಯಿಂದ ಮರ್ಲೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.ಮಾಹಿತಿ ತಿಳಿದು ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

--ಶವಾಗಾರದ ಮುಂದೆ ಹೆತ್ತವರ ಆಕ್ರಂದನಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರ‌ ಮೃತದೇಹಗಳನ್ನು ಮಂಗಳವಾರ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತರಲಾಗಿತ್ತು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟುವಂತಿತ್ತು.ಶವಾಗಾರದ ಮುಂದೆ ಕಣ್ಣೀರಿಡುತ್ತಾ ಗೋಳಾಡಿದ ತಾಯಂದಿರು, “ನನ್ನ ಮಗನನ್ನು ಕುಯ್ಯಬೇಡಿ... ನನ್ನ ಮಗನನ್ನು ಕುಯ್ದರೆ ನಾನೂ ಇರಲ್ಲ, ಸತ್ತು ಹೋಗ್ತೀನಿ” ಎಂದು ಅಳುತ್ತಾ ಅಸಹಾಯಕತೆ ವ್ಯಕ್ತಪಡಿಸಿದರು.“ಇದ್ದೋನೊಬ್ಬ ಆಸರೆಯಾಗ್ತಾನೆ ಅಂದುಕೊಂಡಿದ್ದೆ. ನನಗೆ ಯಾರೂ ಇಲ್ಲ. ಎಲ್ಲರಿಗೂ ಒಳ್ಳೆಯದ್ದೇ ಮಾಡಿದ್ದೆ, ಯಾರಿಗೂ ಮೋಸ ಮಾಡಿರಲಿಲ್ಲ. ನನಗೇ ಯಾಕೆ ಹೀಗಾಯಿತು? ಯಾರಿಗೆ ಏನು ಅನ್ಯಾಯ ಮಾಡಿದ್ದೆ? ಯಾರಿಗಾಗಿ ಇರಲಿ, ನಾನು ಇರಲ್ಲ...” ಎಂದು ತಾಯಿ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು.ಮೃತದೇಹಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ದುಃಖದ ನಡುವೆ ಆಸ್ಪತ್ರೆ ಆವರಣದಲ್ಲಿ ಕೆಲಕಾಲ ಶೋಕದ ವಾತಾವರಣ ನಿರ್ಮಾಣವಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶ್ವ ಮೆಚ್ಚಿದ ಹೆಮ್ಮೆಯ ಭಾರತೀಯ ಕ್ಯಾಪ್ಟನ್ ಸ್ಮಿತ್: ಬಸವ ಮಹಾಲಿಂಗ ಶ್ರೀ
ಯುವ ಆಲೋಚನೆಗಳೇ ಸಮಾಜದ ಬಲ: ಡಾ. ಚಂದ್ರಶೇಖರ್‌