ಅರಮನೆಗೆ ಮೂರು ಆನೆಗಳು ರವಾನೆ

KannadaprabhaNewsNetwork |  
Published : Aug 26, 2025, 02:00 AM IST
ಮೈಸೂರಿಗೆ ತೆರಳಿದ ಎರಡನೇ ತಂಡದ ಆನೆಗಳು | Kannada Prabha

ಸಾರಾಂಶ

ದುಬಾರೆ ಸಾಕಾನೆ ಶಿಬಿರದಿಂದ ಮೂರು ಆನೆಗಳು ಅರಮನೆಯತ್ತ ಸೋಮವಾರ ಲಾರಿ ಮೂಲಕ ಸಾಗಿದವು.

ಕನ್ನಡಪ್ರಭ ವಾರ್ತೆ ಕುಶಾಲನಗರ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಿಂದ ಎರಡನೇ ತಂಡದ ಮೂರು ಆನೆಗಳು ಅರಮನೆಯತ್ತ ಸೋಮವಾರ ಲಾರಿ ಮೂಲಕ ಸಾಗಿದವು. ಶಿಬಿರದ ಆನೆಗಳಾದ ಸುಗ್ರೀವ, ಗೋಪಿ ಮತ್ತು ಹೇಮಾವತಿ ಆನೆಗಳನ್ನು ಶಿಬಿರದಿಂದ ಅರಣ್ಯ ಅಧಿಕಾರಿ ಸಿಬ್ಬಂದಿ, ಬೀಳ್ಕೊಟ್ಟರು.

-------------------------------

2026 ಏ. 5ರಿಂದ ಕೊಡವ ಕೌಟುಂಬಿಕ ಹಾಕಿ ಉತ್ಸವಪ್ರತಿ ಒಂದು ಗೋಲಿಗೆ ಒಂದು ಮರ ನೆಡುವ ಕಾರ್ಯಕ್ರಮ ಆಯೋಜನೆಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಾರಥ್ಯದಲ್ಲಿ 2026ನೇ ಏ. 5ರಿಂದ ಮೇ 2ರವರೆಗೆ ಚೇನಂಡ ಕುಟುಂಬದ ಸಾರಥ್ಯದಲ್ಲಿ ಕೊಡವ ಕೌಟುಂಬಿಕ ಹಾಕಿ ಉತ್ಸವ ನಡೆಯಲಿದ್ದು, ಈ ಬಾರಿ ಪ್ರತಿ ಒಂದು ಗೋಲಿಗೆ ಒಂದು ಮರ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಚೇನಂಡ ಹಾಕಿ ಉತ್ಸವ ಸಮಿತಿ ಕಾರ್ಯದರ್ಶಿ ಮಧು ಮಾದಯ್ಯ ತಿಳಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಹಾಕಿ ಮೈದಾನದಲ್ಲಿ ಚೇನಂಡ ಹಾಕಿ ಪಂದ್ಯಾವಳಿ ನಡೆಯಲಿದ್ದು, ಹಲವು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಪಂದ್ಯಾವಳಿ ನಡೆಸಲು ತೀರ್ಮಾನಿಸಲಾಗಿದೆ. ಕೊಡವರು ಪ್ರಕೃತಿಯ ಆರಾಧಕರಾಗಿದ್ದು, ಪ್ರಕೃತಿಯೊಂದಿಗೆ ಬೆರೆತು ಬದುಕುತ್ತಿದ್ದೇವೆ. ಹೀಗಾಗಿ ಪ್ರತಿ ಒಂದು ಗೋಲಿಗೆ ಒಂದು ಮರ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮರ ನೆಡುವ ಕಾರ್ಯಕ್ರಮಕ್ಕೆ ಕೋಕೇರಿ ಗ್ರಾಮದ ನೀಲಿಯಾಟ್ ಮಂದ್‌ನಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಚಾಲನೆ ನೀಡಲಿದ್ದಾರೆ. 2ನೇ ಹಂತದಲ್ಲಿ ವಿಧಾನಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಕರಡ ಗ್ರಾಮದ ಮಲೆತಿರಿಕೆ ದೇವಸ್ಥಾನದಲ್ಲಿ ಸೆ.8ರಂದು ಚಾಲನೆ ನೀಡಲಿದ್ದಾರೆ. 3ನೇ ಹಂತದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.ಸುಮಾರು 2,500 ಸಸಿಗಳನ್ನು ಮುಂದಿನ 15 ದಿನಗಳಲ್ಲಿ ನೆಡುವ ಕಾರ್ಯ ಪೂರ್ಣಗೊಳಿಸಲಿದ್ದೇವೆ. ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಕಂಬನಿ ಕರುಂಬಯ್ಯ, ಜಂಟಿ ಕಾರ್ಯದರ್ಶಿ ತಮ್ಮಿ ತಮ್ಮಯ್ಯ, ವಕ್ತಾರ ಸುರೇಶ್ ನಾಣಯ್ಯ, ಸದಸ್ಯ ಸಚಿನ್ ಅಯ್ಯಪ್ಪ ಉಪಸ್ಥಿತರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ